ತುಂಗಭದ್ರಾ ಜಲಾಶಯಕ್ಕೆ ಇಂದು ಬಾಗಿನ ಅರ್ಪಣ
ವಿಜಯನಗರ: ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಲಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ಗೆ ತಾತ್ಕಾಲಿಕ ಗೇಟ್ ಅಳವಳಡಿಕೆಯ 25 ದಿನಗಳ ಬಳಿಕ ಡ್ಯಾಂ ಭರ್ತಿಯಾಗಿದೆ.
ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯ ಮತ್ತೆ ಭರ್ತಿಯಾಗಿದೆ. ಬಾಗಿನ ಅರ್ಪಣೆ ಕಾರ್ಯಕ್ರಮದ ಸಲುವಾಗಿ ತುಂಗಭದ್ರಾ ಜಲಾಶಯ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಜಲಾಶಯದ ಸೇತುವೆಯ ಮೇಲೆ ಕನ್ನಡ ಧ್ವಜಗಳು ರಾರಾಜಿಸುತ್ತಿವೆ. ಅಲ್ಲದೇ ತಳಿರು ತೋರಣ, ಬಾಳೆಯಿಂದ ಜಲಾಶಯಯವನ್ನು ಅಲಂಕರಿಸಲಾಗಿದೆ.