ತುಂಬಾ ದಿನಗಳಿಂದ ತಲೆ ಮರೆಸಿಕೊಂಡಿದ್ದ ಸುಶಾಂತ್ ಸ್ನೇಹಿತ ಅರೆಸ್ಟ್

Date:

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಕೇಸ್‌ಗೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯ ಬಂಧನವಾಗಿದೆ. ಬಹಳ ದಿನಗಳಿಂದ ತಲೆಮರೆಸಿಕೊಂಡಿದ್ದ ಸುಶಾಂತ್ ಸಿಂಗ್ ಸ್ನೇಹಿತ ಕುನಾಲ್ ಜಾನಿಯನ್ನು ಎನ್‌ಸಿಬಿ ಅಧಿಕಾರಿಗಳು ಮುಂಬೈನ್ ಖಾರ್ ಪ್ರದೇಶದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

 

”ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿವಂಗತ ನಟ ಸುಶಾಂತ್ ಸಿಂಗ್ ಗೆಳಯ ಕುನಾಲ್ ಜಾನಿಯನ್ನು ಮುಂಬೈ ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ” ಎಂದು ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

ಕುನಾಲ್ ಜಾನಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಇಂಡಿಯಾ ಟುಡೇಗೆ ಪ್ರತಿಕ್ರಿಯಿಸಿದ್ದು, “ಡ್ರಗ್ ಪೆಡ್ಲರ್‌ಗಳೊಂದಿಗಿನ ಸಂಪರ್ಕ ಮತ್ತು ಕಳೆದ ವರ್ಷ ಎನ್‌ಸಿಬಿ ಭೇದಿಸಿದ ಡ್ರಗ್ ಸಿಂಡಿಕೇಟ್ ಬಗ್ಗೆ ಕುನಾಲ್ ಜಾನಿಯನ್ನು ತನಿಖೆ ನಡೆಸಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ

 

 

Share post:

Subscribe

spot_imgspot_img

Popular

More like this
Related

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...