ತೆರಿಗೆ ಪಾಲಿನಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಕಳೆದ ಐದು ವರ್ಷಗಳಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಸುಮಾರು 60 ಸಾವಿರ ಕೋಟಿ ರೂ. ಅನ್ಯಾಯವಾಗಿದೆ. ಬಿಜೆಪಿ ಸಂಸದರು ಕರ್ನಾಟಕದ ಪರ ಧ್ವನಿ ಎತ್ತದೆ, ರಾಜ್ಯದ ಜನರಿಗೆ ದ್ರೋಹವೆಸಗುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರದಿಂದ ರಾಜ್ಯಕ್ಕೆ ಕೇವಲ 6498 ಕೋಟಿ ರೂ.ಗಳ ತೆರಿಗೆ ಪಾಲು ಬಂದಿದ್ದು, ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ., 31000 ಕೋಟಿಗೂ ಹೆಚ್ಚಾಗಿ ಉತ್ತರ ಪ್ರದೇಶ ರಾಜ್ಯಕ್ಕೆ ನೀಡಲಾಗಿದೆ ಎಂದರು.