ಐಟಿ ದಾಳಿ ಪ್ರಕರಣದಲ್ಲಿ ತನ್ನನ್ನು ವಿಚಾರಣೆ ಮಾಡದೇ ಕೈಬಿಡಬೇಕು ಎಂದು ಕೋರಿ ಸಚಿವ ಡಿ.ಕೆ.ಶಿವಕುಮಾರ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ತೀರ್ಪುನ್ನು ಇಂದಿಗೆ ಕಾಯ್ದಿರಿಸಿದ್ದರು.
ಇಂದು ಅರ್ಜಿ ವಿಚಾರಣೆ ತೀರ್ಪುನ್ನು ನೀಡಿದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅವರು ಸಚಿವ ಡಿಕೆ ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ದೂರಿನ ವಿಚಾರಣೆ ಅಥಾವ ತನಿಖೆಯನ್ನು ಮುಂದುರಿಸುವಂತೆ ಆದೇಶ ನೀಡಿದೆ.