No menu items!
20.3 C
Munich
Monday, June 15, 2026

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Must read

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:ಭಾರತ ಸರ್ಕಾರ ನಮ್ಮನ್ನ ಕೊಲೆ ಮಾಡುತ್ತಿದೆ. ಚುನಾವಣೆಗಾಗಿ ತೈಲ ಬೆಲೆ ಕಡಿಮೆ ಮಾಡಿದ್ದಾರೆ. ನಯಾರ ಕಂಪನಿಯವರು ಇಂಧನ ಬೆಲೆಯನ್ನು ಹೆಚ್ಚಳ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕೇಂದ್ರ ಸರ್ಕಾರ ಇಂಧನ ತೈಲದ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ’ (special additional excise duty) ಇಳಿಕೆ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಶುಕ್ರವಾರ ಈ ರೀತಿ ಪ್ರತಿಕ್ರಿಯೆ ನೀಡಿದರು. ರಾಜ್ಯ ಸರ್ಕಾರ ತೈಲ ಬೆಲೆ ಕಡಿಮೆ ಮಾಡಲಿದೆಯೇ ಎಂದು ಕೇಳಿದಾಗ, “ಆನಂತರ ಇದರ ಬಗ್ಗೆ ಮಾತನಾಡುತ್ತೇವೆ” ಎಂದರು.
ಅಲ್ಪಸಂಖ್ಯಾತರ ಮತಗಳು ವಿಭಜನೆಯಾಗುತ್ತವೆಯೇ ಎಂದು ಕೇಳಿದಾಗ, “ಯಾವುದೇ ಕಾರಣಕ್ಕೂ ವಿಭಜನೆ ಆಗುವುದಿಲ್ಲ. ಬೇರೆ ಸಮುದಾಯಗಳೂ ಆಗುವುದಿಲ್ಲ. ಶಿವಶಂಕರಪ್ಪ ಅವರಿಗಿಂತ ಹೆಚ್ಚು ಮತಗಳ ಅಂತರದಿಂದ ಅವರ ಮೊಮ್ಮಗ ಸಮರ್ಥ್ ಗೆಲ್ಲುತ್ತಾರೆ. ಅವರು ಸಾಕಿದಂತಹ ಮಗ. ಗೆಲ್ಲುತ್ತಾನೆ ಎನ್ನುವ ವಿಶ್ವಾಸವಿದೆ. ದಾವಣಗೆರೆಗೆ ಕೊಡುಗೆಯನ್ನು ಇಡೀ ರಾಜ್ಯ ನೋಡುವಂತೆ ಆ ಕುಟುಂಬ ಕೊಟ್ಟಿದೆ. ಜನ ಅವರನ್ನ ಸ್ಮರಿಸುತ್ತಿದ್ದಾರೆ”ಎಂದರು.

- Advertisement -spot_img

More articles

- Advertisement -spot_img

Latest article