ತೊಗರಿ ಉತ್ಪಾದನೆ ಉತ್ತೇಜನಕ್ಕೆ 88 ಕೋಟಿ ರೂ. ಒದಗಿಸಲಾಗುವುದು: ಸಿದ್ದರಾಮಯ್ಯ

tnit editors
1 Min Read

ತೊಗರಿ ಉತ್ಪಾದನೆ ಉತ್ತೇಜನಕ್ಕೆ 88 ಕೋಟಿ ರೂ. ಒದಗಿಸಲಾಗುವುದು: ಸಿದ್ದರಾಮಯ್ಯ

ಬೆಂಗಳೂರು: ತೊಗರಿ ಉತ್ಪಾದನೆ ಉತ್ತೇಜನಕ್ಕೆ 88 ಕೋಟಿ ರೂ. ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆ 16ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್‌ ನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಸರ್ಕಾರ ನಿರ್ಧರಿಸಿದೆ.
ಕ್ವಿಂಟಾಲ್ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದಿಂದ 450 ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದರಿಂದ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕೋಲಾರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಅನುಕೂಲವಾಗಲಿದೆ.
ಇನ್ನೂ ನಕ್ಸಲ್ ಪೀಡಿತ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಕ್ಸಲ್ ಪ್ಯಾಕೇಜ್ ಘೋಷಣೆ ಮಾಡಿದ್ದು, 10 ಕೋಟಿ ರೂ. ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.

Share This Article