ತ.ನಾಡಿನಲ್ಲೂ ಕೊರೊನಾ ಟಫ್ ರೂಲ್ಸ್‌ ಜಾರಿ

0
46

ದೇಶಾದ್ಯಂತ ಕೊರೊನಾ ವೈರಸ್ ಹಾವಳಿ ಜೋರಾಗಿದ್ದು, ಇದೇ ಕಾರಣಕ್ಕಾಗಿ ಅನೇಕ ರಾಜ್ಯಗಳು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸುತ್ತಿವೆ.

ತಮಿಳುನಾಡಿನಲ್ಲೂ ಕೊರೊನಾ ಆರ್ಭಟ ಹೆಚ್ಚಿದ್ದು ಸ್ಟಾಲಿನ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ನಾಳೆಯಿಂದ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ಇದರ ಜೊತೆಗೆ ಭಾನುವಾರದಂದು ಲಾಕ್ಡೌನ್ ಹೇರಿಕೆ ಮಾಡುವುದಾಗಿ ಘೋಷಣೆ ಮಾಡಿದೆ.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಾತನಾಡಿ, ರಾಜ್ಯದಲ್ಲಿ ನಾಳೆ ರಾತ್ರಿ 10ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಭಾನುವಾರದಂದು ಲಾಕ್ಡೌನ್ ಹೇರಿಕೆ ಮಾಡಲಾಗುವುದು ಎಂದಿದ್ದಾರೆ.

ಜನವರಿ 9ರಂದು ರೆಸ್ಟೋರೆಂಟ್ಗಳು ಬೆಳಗ್ಗೆ 7ರಿಂದ ರಾತ್ರಿ 10ರವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ. 1ರಿಂದ 9ನೇ ತರಗತಿವರೆಗೆ ಆನ್ಲೈನ್ ತರಗತಿಗಳು ನಡೆಯಲಿದ್ದು, 10ರಿಂದ 12ನೇ ತರಗತಿ ವಿದ್ಯಾರ್ಥಿಗಳು ಶಾಲಾ-ಕಾಲೇಜ್ಗಳಿಗೆ ತೆರಳಲು ಅವಕಾಶ ನೀಡಲಾಗಿದೆ.

ತಮಿಳುನಾಡಿನ ಪ್ರಸಿದ್ಧ ಹಬ್ಬ ಪೊಂಗಲ್ಗೆ ಸಂಬಂಧಿಸಿದ ಸರ್ಕಾರಿ, ಖಾಸಗಿ ಸಮಾರಂಭಗಳನ್ನು ಮುಂದೂಡಲಾಗಿದೆ. ಬಸ್, ಉಪನಗರ ರೈಲುಗಳು ಹಾಗೂ ಮೆಟ್ರೋಗಳಲ್ಲಿ ಶೇ. 50ರ ಆಸನದೊಂದಿಗೆ ಕಾರ್ಯನಿರ್ವಹಿಸಲಿವೆ. ಶುಕ್ರವಾರ, ಶನಿವಾರ ಮತ್ತು ಭಾನುವಾರ ಧಾರ್ಮಿಕ ಸ್ಥಳಗಳಲ್ಲಿ ಭಕ್ತರಿಗೆ ಅನುಮತಿ ಇರುವುದಿಲ್ಲ ಎಂದು ಸಿಎಂ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here