ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ‘ದಬಾಂಗ್ 3’ ವಿಲನ್ ಪಾತ್ರದಲ್ಲಿ ಮಿಂಚಿದ್ದಾರೆ. ಈ ಚಿತ್ರ ಕನ್ನಡದಲ್ಲೂ ಸಹ ಬರುತ್ತಿದೆ ಪ್ರಭುದೇವ ಚಿತ್ರ ನಿರ್ದೇಶಿಸಿದ್ದಾರೆ. ಹಿಂದಿ, ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ‘ದಬಾಂಗ್ 3’ ನಿರ್ಮಾಣವಾಗಿದೆ.
‘ದಬಾಂಗ್’, ‘ದಬಾಂಗ್ 2’ ಭರ್ಜರಿ ಯಶಸ್ಸು ಕಂಡಿದ್ದು, ಈಗ ‘ದಬಾಂಗ್ 3’ ಮೇಲೆ ಭಾರಿ ನಿರೀಕ್ಷೆ ಮೂಡಿದೆ.ಚಿತ್ರದ ಪ್ರಚಾರಕ್ಕಾಗಿ ಸಲ್ಮಾನ್ ಖಾನ್ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಅಭಿಮಾನಿಗಳ ನೂಕುನುಗ್ಗಲು ಉಂಟಾಗಿದ್ದು, ನಿಯಂತ್ರಿಸುವಲ್ಲಿ ಭದ್ರತಾ ಸಿಬ್ಬಂದಿ ಹರಸಾಹಸ ಪಟ್ಟಿದ್ದರು ಎಂದು ಹೇಳಲಾಗುತ್ತಿದೆ .