ಬೆಂಗಳೂರು: ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಸದ್ಯ ಅವರನ್ನು ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇನ್ನೂ ಘಟನೆ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮೀ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲೂ ಯಾವುದೇ ಪೋಸ್ಟ್ ಹಾಕಿಲ್ಲ.
ಅಲ್ಲದೆ ವಿಜಯಲಕ್ಷ್ಮಿ ಇನ್ಸ್ಟಾಗ್ರಾಮ್ ಪ್ರಾಫೈಲ್ ಫೋಟೋನ ಡಿಲೀಟ್ ಮಾಡಿರುವುದರ ಜೊತೆಗೆ ದರ್ಶನ್ ಅವರನ್ನು ಅನ್ಫಾಲೋ ಮಾಡಿದ್ದಾರೆ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಇತ್ತೀಚಿನ ದಿನಗಳಲ್ಲಿ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರು ತುಂಬಾ ಅನ್ಯೋನ್ಯವಾಗಿದ್ದರು. ಎಲ್ಲ ಜಗಳ ಮುಗಿದು ಚೆನ್ನಾಗಿದ್ದರು ಎನ್ನುವಷ್ಟರಲ್ಲಿ ದರ್ಶನ್ ಕೊಲೆ ಕೇಸ್ನಲ್ಲಿ ಆರೋಪಿಯಾಗಿ ಕಂಬಿ ಹಿಂದೆ ನಿಂತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.
ಪವಿತ್ರಾ ಗೌಡಗೆ ಇವರು ಅಶ್ಲೀಲ ಸಂದೇಶ ಹಾಗೂ ಫೋಟೋ ಕಳುಹಿಸುತ್ತಿದ್ದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಕೊಲೆ ಮಾಡಲಾಗಿದೆ. ಈ ಆರೋಪದ ಮೇಲೆ ದರ್ಶನ್, ಪವಿತ್ರಾ ಸೇರಿ 13 ಜನರನ್ನು ಬಂಧಿಸಲಾಗಿದೆ.