ದರ್ಶನ್ ಅವ್ರೇ ನಂಗೆ ಯಾವ್ದೇ ಕೊಂಬೂ ಬರ್ಲಿಲ್ಲ ಅಂದ ಪ್ರೇಮ್!

Date:

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಚಾರದಲ್ಲಿ ತನ್ನ ಹೆಸರು ಥಳುಕು ಹಾಕಿಕೊಂಡಿದ್ದಕ್ಕೆ ನಿರ್ದೇಶಕ ಪ್ರೇಮ್ ಪ್ರತಿಕ್ರಿಯೆ ನೀಡಿದ್ದಾರೆ. ಇನ್‍ಸ್ಟಾಗ್ರಾಂ ಖಾತೆಯಲ್ಲಿ, ನನಗೆ ಯಾವ ಕೊಂಬೂ ಬಂದಿಲ್ಲ. ಇನ್ನೊಬ್ರ ಬಗ್ಗೆ ಮಾತನಾಡಬೇಕಾದರೆ ಯೋಚಿಸಿ ಮಾತನಾಡಿ ಎಂದು ದರ್ಶನ್‍ಗೆ ಕಿವಿಮಾತು ಹೇಳಿ, ತಮ್ಮ ಹೆಸರು ಪ್ರಸ್ತಾಪಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Instagram ಪೋಸ್ಟ್ ನಲ್ಲೇನಿದೆ..?: ಕರಿಯ ಸಿನೆಮಾದಿಂದ ತೊಡಗಿ ವಿಲ್ಲನ್ ಸಿನೆಮಾದವರೆಗೆ ಏನಾಯಿತು ಎಂಬುದನ್ನು ಕೂಡಾ ಪ್ರೇಮ್ ವಿವರವಾಗಿ ಬರೆದುಕೊಂಡಿದ್ದಾರೆ. ಜೊತೆಗೆ ತನಗೆ ಹ್ಯಾಟ್ರಿಕ್ ನಿರ್ದೇಶಕ ಎಂಬ ಬಿರುದು ಬಂದಾಗಲೂ ನನಗೆ ಕೊಂಬು ಬರಲಿಲ್ಲ ಎಂದು ಬರೆದುಕೊಂಡಿದ್ದಾರೆ. ನಿರ್ದೇಶಕ ಪ್ರೇಮ್ ಅವರು ಇನ್‍ಸ್ಟಾಗ್ರಾಂ ಪೋಸ್ಟ್ ನಲ್ಲಿ ಹಾಕಿಕೊಂಡ ಬರಹದ ಪೂರ್ಣ ರೂಪ ಇಲ್ಲಿದೆ.
ದರ್ಶನ್ ಅವ್ರೆ, ನಾನು ಕರಿಯ ಸಿನಿಮಾ ಮಾಡ್ಬೇಕಾದ್ರೆ ಯಾವ್ ಪುಡಂಗುನೂ ಅಲ್ಲಾ ನಂಗ್ ಕೊಂಬು ಇರ್ಲಿಲ್ಲ.. ನಾನೊಬ್ಬ ಸಾಮಾನ್ಯ ನಿರ್ದೇಶಕ. ರಾಜಕುಮಾರ್ ರವರು, ಅಂಬರೀಷ್ ರವರು, ವಿಷ್ಣುವರ್ಧನ್ ರವರು ಹಾಗೂ ರಜನಿಕಾಂತ್ ರವರು ಒಬ್ಬ ಒಳ್ಳೆ ನಿರ್ದೇಶಕ ಅಂದು ಬೆನ್ನು ತಟ್ಟಿದ್ರು. ಇಡೀ ಕರ್ನಾಟಕ ಜನತೆ ಹರಸಿ ಹಾರೈಸಿ ಹ್ಯಾಟ್ರಿಕ್ ನಿರ್ದೇಶಕ ಅಂತ ಬಿರುದು ಕೊಟ್ಟಾಗ್ಲು ನನಗ್ ಕೊಂಬು ಬರ್ಲಿಲ್ಲ.. ನಾನು ನಂದೇ ಆದ್ ಸ್ಟೈಲ್ ನಲ್ಲಿ ಸಿನಿಮಾ ಮಾಡ್ಕೊಂಡು ಬಂದೋವ್ನು.. ಸುಮಾರು ನಿರ್ಮಾಪಕರುಗಳು ಹಾಗೂ ನಿಮ್ಮ ಅಭಿಮಾನಿಗಳು ಹಾಗೂ ನನ್ನ ಅಭಿಮಾನಿಗಳು ಪ್ರತಿ ಸಾರಿ ದರ್ಶನ್ ಹಾಗೂ ನಿಮ್ಮ ಕಾಂಬಿನೇಶನ್ ನಲ್ಲಿ ಯಾವಾಗ ಚಿತ್ರ ಮಾಡ್ತಿರಂತ ಕೇಳ್ತಾನೆಯಿದ್ರು. ಇದ್ರ ಬಗ್ಗೆ ನಿಮಗೂ ಗೊತ್ತು ನನಗು ಗೊತ್ತು. ಇಬ್ಬರು ಸೇರಿ ಸಿನಿಮಾ ಮಾಡೋದ್ರ ಬಗ್ಗೆ ಚೆರ್ಚೆ ಮಾಡಿದ್ವಿ. ನಾನು ನಮ್ ಬ್ಯಾನರ್ ನಲ್ ಸಿನಿಮಾ ಮಾಡಿ ಇಲ್ಲಾ ನಿಮ್ ಬ್ಯಾನರ್ ನಲ್ ಸಿನಿಮಾ ಮಾಡೋಣ ಅಂತ ಮತ್ತೆ ಚರ್ಚೆ ಮಾಡಿದ್ವಿ. ಆದರೆ ನನಗೆ ಉಮಾಪತಿಯವರು, ನೀವು ಹಾಗೂ ದರ್ಶನ್ ಸೇರಿ ನಂಗ್ ಸಿನಿಮಾ ಮಾಡ್ಕೊಡಿ ಅಂತ ಅಂದ್ರು. ಅದಿಕ್ಕೆ ನಾನು ಉಮಾಪತಿ ಅವ್ರನ್ನ ನಿಮಗೆ ಪರಿಚಯ ಮಾಡಿ.. ಮೂರು ಜನ ಸೇರಿ ಸಿನಿಮಾ ಮಾಡೋಣ ಅಂತ ಡಿಸೈಡ್ ಮಾಡಿದ್ವಿ.. ಆದ್ರೆ ನನ್ ದಿ ವಿಲ್ಲನ್ ಸಿನಿಮಾ ಲೇಟ್ ಆದ ಕಾರಣ ನಾನೇ ಉಮಾಪತಿಯವರಿಗೆ ದರ್ಶನ್ ಅವ್ರ ಡೇಟ್ ಇದ್ದ ಕಾರಣ ಬೇರೆ ನಿರ್ದೇಶಕರನ್ನ ಹಿಡಿದು ಸಿನಿಮಾ ಮಾಡಿ ಅಂತ ಹೇಳಿದ್ದೆ.. ನನ್ನ ಸಂಭಾವನೆಯನ್ನ ಉಮಾಪತಿಯವರಿಗೆ ವಾಪಾಸ್ ನೀಡಿ ರಾಬರ್ಟ್ ಸಿನಿಮಾ ಗೆ ಹಾರೈಸಿದವನು ನಾನು.. ಅದೇ ರೀತಿ ರಾಬರ್ಟ್ ಚಿತ್ರ ಹಿಟ್ ಆಯ್ತು, ಎಲ್ಲರ ಹಾಗೇ ನಾನು ಖುಷಿ ಪಟ್ಟೆ.. ಇದ್ರ ಮದ್ಯೆ ನನ್ ಹೆಸ್ರು ಯಾಕೆ.. ದರ್ಶನ್ ಅವ್ರೆ ನಿರ್ದೇಶಕ್ರು ಯಾವ್ ಪುಡಂಗಿಗಳು ಅಲ್ಲಾ, ಅವ್ರಿಗೆ ಕೊಂಬು ಇರಲ್ಲ.. ತೆರೆಮೇಲೆ ಒಬ್ಬ ನಟನನ್ನ ಹುಟ್ಟಾಕಿ ಅವ್ನಿಗ್ ಕೊಂಬು ಬರ್ಬೇಕಾದ್ರೆ ನಿರ್ದೇಶಕನ ಶ್ರಮ ಎಷ್ಟಿರುತ್ತೆಂತ ಪ್ರತಿಯೊಬ್ಬ ಕಲಾವಿದರಿಗೂ ಗೊತ್ತು ಅದು ನಿಮ್ಗೂ ಗೊತ್ತು.. ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ… Thank you for your kind words. ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ..

Share post:

Subscribe

spot_imgspot_img

Popular

More like this
Related

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...