ದರ್ಶನ್ ಆಯ್ತು ಇದೀಗ ಲೋಕಸಭಾ ಚುನಾವಣೆಗೆ ನಟಿ ಸುಮಲತಾ ಅಂಬರೀಶ್ ಅವರು ಸ್ಪರ್ಧಿಸುವ ವಿಷಯದ ಬಗ್ಗೆ ಅಂಬರೀಷ್ ಆಪ್ತ ನಟ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ.

ಪ್ರಚಾರ ಮಾಡೋಕೆ ದರ್ಶನ್ ಇರುವಾಗ ಅಲ್ಲಿ ನಾನ್ಯಾಕೆ ಬೇಕು ಅನ್ನುವ ಪ್ರಶ್ನೆಯನ್ನು ಹಾಕುವುದರ ಮೂಲಕ ಇದೀಗ ಎಲ್ಲರ ಗಮನವನ್ನ ತಮ್ಮತ್ತ ಸೆಳೆದಿದ್ದಾರೆ?
ಜೊತೆಗೆ ಲೊಕಸಭೆಗೆ ಸಂಬಂಧಿಸಿದ ಕ್ಯಾಂಪೆನ್ ವಿಚಾರವಾಗಿ ನನಗೆ ಇನ್ನೂ ಯಾವುದೇ ರೀತಿಯ ಕರೆ ಸುಮಲತಾ ಅವರ ಕಡೆಯಿಂದ ಬಂದಿಲ್ಲ ಒಂದು ವೇಳೆ ಬಂದರೆ ನೋಡೋಣ, ಈಗ ರಾಜಕೀಯದಿಂದ ತುಂಬಾ ದೂರ ಇದ್ದೇನೆ ಜೊತೆಗೆ ಸಾಕಷ್ಟು ನಿರ್ಮಾಪಕರು ನನ್ನ ನಂಬಿ ಹಣ ಹಾಕಿದ್ದಾರೆ ಅವರಿಗೆ ನ್ಯಾಯ ಒದಗಿಸುವುದು ನನ್ನ ಜವಾಬ್ದಾರಿ ಹಾಗಾಗಿ ಸಿನಿಮಾದಲ್ಲಿ ಬ್ಯುಸಿ ಆಗಿದ್ದೇನೆ ಅಲ್ಲದೆ ಸುಮಲತಾ ಅವರ ಹೆಸರ ಮುಂದೆಯೇ ಅಂಬರೀಶ್ ಎಂಬ ಹೆಸರು ಇದೆ ಅದು ದೊಡ್ಡ ಹೆಸರು, ಸುಮಲತಾ ಅವರು ಚುನಾವಣೆಯಲ್ಲಿ ಗೆಲ್ಲಲು ಆ ಹೆಸರೇ ಸಾಕು. ಅಲ್ಲದೆ ದರ್ಶನ್ ಅವರು ಕೂಡ ಸುಮಲತಾ ಅವರ ಜೊತೆ ಇದ್ದಾರೆ ಇನ್ನೇನು ಬೇಕು ಎಂದು ತಮ್ಮ ಪ್ರತಿಕ್ರಿಯೆಯನ್ನ ನೀಡಿದ್ದಾರೆ.

ಇದಕ್ಕು ಮೊದಲು ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ. ದರ್ಶನ್ ನನ್ನ ಪರ ನಿಲ್ಲುತ್ತಾರೆ ಎನ್ನುವ ನಂಬಿಕೆ ನನಗೆ ಇದೆ ಎಂದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಈ ಬಗ್ಗೆ ನಗರದ ಖಾಸಗಿ ಹೋಟೆಲಿನಲ್ಲಿ ನಡೆದ ‘ಯಜಮಾನ’ ಚಿತ್ರದ ಸಕ್ಸಸ್ ಪ್ರೆಸ್‍ಮೀಟ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು. ಅಂಬರೀಶ್ ಅವರು ಚುನಾವಣೆಗೆ ನಿಂತಾಗಲೂ ಪ್ರಚಾರಕ್ಕೆ ಹೋಗಿದ್ದೇನೆ. ಈಗಲೂ ಹೋಗುತ್ತೇನೆ. ಸುಮಲತಾ ಪರ ಪ್ರಚಾರ ಮಾಡುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ. ಅಲ್ಲದೆ ಸುಮಲತಾ ಅಂಬರೀಶ್ ಚುನಾವಣೆಯಲ್ಲಿ ಸ್ಪರ್ಧಿಸಿ, ಚುನಾವಣಾ ಪ್ರಚಾರಕ್ಕೆ ಕರೆದರೆ ನಾನು ಹೋಗುತ್ತೇನೆ ಎಂದು ತಿಳಿಸಿದ್ದರು.
ಒಟ್ಟಾರೆ ಹೋದಲ್ಲಿ ಬಂದಲ್ಲಿ ಸುಮಲತಾ ಅವ್ರು ದರ್ಶನ್ ಹಾಗೂ ಯಶ್ ಹೆಸರು ಮಾತ್ರ ಹೇಳಿದ್ದರಿಂದ ಸುದೀಪ್ ಅವರು ಬೇಸರಗೊಂಡಿದ್ದಾರ ಎಂಬ ಅನುಮಾನ ಇದೀಗ ಎಲ್ಲರನ್ನು ಕಾಡುತ್ತಿದೆ.
