ದರ್ಶನ್ ಜಾಮೀನು ಭವಿಷ್ಯ ಇಂದು ಸುಪ್ರೀಂ ಕೋರ್ಟ್‌ನಿಂದ ನಿರ್ಧಾರ
ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳ ಜಾಮೀನಿನ ಭವಿಷ್ಯ ಇಂದು ಸುಪ್ರೀಂ ಕೋರ್ಟ್ನಲ್ಲಿ ತೀರ್ಮಾನವಾಗಲಿದೆ. 2024ರ ಡಿಸೆಂಬರ್ ತಿಂಗಳಲ್ಲಿ ಕರ್ನಾಟಕ ಹೈಕೋರ್ಟ್ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.
ಆದರೆ ಈ ನಿರ್ಧಾರವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಕೋರಿದೆ. ಅದಕ್ಕೆ ಸಂಬಂಧಿಸಿದಂತೆ ಜುಲೈ 17ರಂದು ವಿಚಾರಣೆ ನಡೆಯಲಿದೆ.
2024ರ ಜೂನ್ನಲ್ಲಿ ರೇಣುಕಾಸ್ವಾಮಿ ಶವ ಪತ್ತೆ ಆದ ನಂತರ ದರ್ಶನ್ ಹಾಗೂ ಇತರ ಆರೋಪಿಗಳನ್ನು ಬಂಧಿಸಲಾಗಿತ್ತು. ಬಳಿಕ ಅವರನ್ನು ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅಲ್ಲಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರಿಂದ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳಿಸಲಾಗಿತ್ತು. ಕಡೆಗೂ 2024ರ ಡಿಸೆಂಬರ್ನಲ್ಲಿ ದರ್ಶನ್ ಜಾಮೀನು ಪಡೆದುಕೊಂಡಿದ್ದರು.
ದರ್ಶನ್ ಪ್ರಭಾವಿ ವ್ಯಕ್ತಿ ಆದ ಕಾರಣ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂಬ ಕಾರಣದಿಂದ ಅವರಿಗೆ ನೀಡಿರುವ ಜಾಮೀನನ್ನು ರಾಜ್ಯ ಸರ್ಕಾರ ಪ್ರಶ್ನಿಸಿದೆ. ಜಾಮೀನು ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್ ಯಾವ ಆದೇಶ ನೀಡಲಿದೆ ಎಂಬುದರ ಮೇಲೆ ದರ್ಶನ್ ಮತ್ತು ಇತರ ಆರೋಪಿಗಳ ಭವಿಷ್ಯ ನಿರ್ಧಾರ ಆಗಲಿದೆ.