ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ನ್ಯಾಯಾಂಗ ಬಂಧನ ಜುಲೈ 18 ರ ವರೆಗೆ ವಿಸ್ತರಣೆ !

Date:

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರ ನ್ಯಾಯಾಂಗ ಬಂಧನ ಇಂದು ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಇಂದು ಕೋರ್ಟ್ ಗೆ ಹಾಜರುಪಡಿಸಬೇಕಿತ್ತು. ಆದರೆ, ಇಂದು ದರ್ಶನ್ ಅವರು ನೇರವಾಗಿ ಕೋರ್ಟ್​ಗೆ ಬರುತ್ತಿಲ್ಲ, ಬದಲಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಎದುರಿಸಿದ್ದಾರೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಕೋರ್ಟ್​, ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ. ಜುಲೈ 18ರವರೆಗೆ ದರ್ಶನ್ ನಟಿ ಪವಿತ್ರಾ ಗೌಡ ಸೇರಿ ಎಲ್ಲರಿಗೂ ನ್ಯಾಯಾಂಗ ಬಂಧನವಾಗಿದೆ.

ಇಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್​ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಯಿತು. ಆರ್ಥಿಕ ಅಪರಾಧಗಳ ಕೋರ್ಟ್​ಗೆ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಆಗಿದೆ. ಜುಲೈ 18ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...