ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಪ್ರಚಾರ ಮಾಡುತ್ತಿದ್ದಾರೆ.
ದರ್ಶನ್ ಮತ್ತು ಯಶ್ ಅವರಲ್ಲದೆ ಅವರ ಪತ್ನಿಯರೂ ಸುಮಲತಾ ಪರ ಪ್ರಚಾರಕ್ಕೆ ಬರಲು ಮುಂದಾಗಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪತ್ನಿ, ನಟಿ ರಾಧಿಕಾ ಪಂಡಿತ್ ಸಹ ಮಂಡ್ಯ ಕಣದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ಪ್ರಚಾರ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಂಡ್ಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿದ್ದಾರೆ. ಸುಮಲತಾ ಪರ ಸ್ಟಾರ್ಗಳು ಪ್ರಚಾರ ಮಾಡುತ್ತಿರುವುದು ಸಿಎಂ ಕುಮಾರಸ್ವಾಮಿ ಸೇರಿದಂತೆ ಮೈತ್ರಿ ನಾಯಕರಿಗೆ ತಲೆನೋವಾಗಿದೆ. ಆದರೆ, ಪ್ರಚಾರಕರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ದರ್ಶನ್ ಮತ್ತು ಯಶ್ ಮಾತ್ರ ಅಲ್ಲ ಅವರ ಪತ್ನಿಯರೂ ಮಂಡ್ಯಕ್ಕೆ ಎಂಟ್ರಿ..!
Date: