ದರ್ಶನ್ ರಾಬರ್ಟ್,ಪುನೀತ್ ಯುವರತ್ನ, ಹೆಚ್ಚು ಸಂಭಾವನೆ ಪಡೆದ ನಟ ಯಾರು?

Date:

ಕನ್ನಡ ಚಿತ್ರರಂಗದಲ್ಲಿ ಹಲವಾರು ಸ್ಟಾರ್ ನಟರು ಇದ್ದಾರೆ ಆದರೆ ಇತ್ತೀಚಿಗೆ ಬಿಡುಗಡೆಯಾದ ಸಿನಿಮಾಗಳಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವ ರತ್ನ ಸಿನಿಮಾ ಹೆಚ್ಚು ಸದ್ದು ಮಾಡಿತ್ತು, ಅಂದಹಾಗೆ ಸ್ಟಾರ್ ನಟರುಗಳ ಸಂಭಾವನೆ ಎಷ್ಟಿರಬಹುದು ಎಂಬ ಕುತೂಹಲ ಎಲ್ಲಾ ಚಿತ್ರಾಭಿಮಾನಿಗಳಲ್ಲಿ ಬಂದೇ ಬರುತ್ತೆ ಹೆಚ್ಚು ಸಂಭಾವನೆ ಪಟ್ಟಿಯಲ್ಲಿ ಪುನೀತ್ ರಾಜಕುಮಾರ್ ದರ್ಶನ್ ಸುದೀಪ್ ಹೀಗೆ ಹಲವು ನಟರು ಈ ಸಾಲಿನಲ್ಲಿ ಬರುತ್ತಾರೆ ಆದರೆ ಅವರ ಸಂಭಾವನೆ ಎಷ್ಟು ಅದರಲ್ಲಿ ಯಾರು ಎಷ್ಟು ಸಂಭಾವನೆ ತೆಗೆದುಕೊಳ್ಳುತ್ತಾರೆ ಎಂಬ ಕುತೂಹಲ ಕೂಡ ಎಲ್ಲರಲ್ಲಿ ಬರುತ್ತದೆ, ಇದು ಕರೋನದ ಮೊದಲನೇ ಅಲೆ ಮುಗಿದನಂತರ ತೆರೆಕಂಡ ಸಿನಿಮಾಗಳಿಗೆ ಸ್ಟಾರ್ ನಟರ ತೆಗೆದುಕೊಂಡ ಸಂಭಾವನೆಯಲ್ಲಿ ಯಾರು ಹೆಚ್ಚು ಸಂಭಾವನೆ ತೆಗೆದುಕೊಂಡಿದ್ದಾರೆ ಎಂಬ ವಿವರಣೆಯ ಸುದ್ದಿಯಷ್ಟೇ.

 

ಉಮಾಪತಿ ಶ್ರೀನಿವಾಸ್ ನಿರ್ಮಾಣದ ರಾಬರ್ಟ್ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕ ನಟನಾಗಿ ಅಭಿನಯಿಸಿದ್ದರು, ಹಾಗೂ ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಮೂಡಿಬಂದ ಯುವರತ್ನ ಸಿನಿಮಾಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕ ನಟನಾಗಿ ಅಭಿನಯಿಸಿದ್ದರು, ಇದರ ಮಧ್ಯೆ ಬಂದ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರ ಅಷ್ಟಾಗಿ ಸದ್ದು ಮಾಡಲಿಲ್ಲ, ಇನ್ನೂ ಸಂಭಾವನೆ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಯುವ ರತ್ನ ಸಿನಿಮಾ ಗೆ ಎಷ್ಟು ಸಂಭಾವನೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಕೊಳ್ಳುವುದಾದರೆ. ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಮೂಡಿಬಂದ ಯುವರತ್ನ ಚಿತ್ರಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ 8 ಕೋಟಿ ಸಂಭಾವನೆಯನ್ನು ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಉಮಾಪತಿ ಶ್ರೀನಿವಾಸ್ ಅವರ ನಿರ್ಮಾಣದಲ್ಲಿ ಮೂಡಿ ಬಂದ ರಾಬರ್ಟ್ ಸಿನಿಮಾಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಬರೋಬ್ಬರಿ 16 ಕೋಟಿ ಸಂಭಾವನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ, ಇದನ್ನು ನೋಡಿದರೆ ಕನ್ನಡ ಚಿತ್ರರಂಗದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇತ್ತೀಚಿನ ದಿನಗಳಲ್ಲಿ ಬರೋಬ್ಬರಿ ಹೆಚ್ಚು ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಮುಂದೆ ಬರುವ ಸಿನಿಮಾಗಳಿಗೆ ಸ್ಟಾರ್ ನಟರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂದು ನೋಡಬೇಕಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...