ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್ ಸೇರಿದಂತೆ ಏಳು ಮಂದಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಪಡಿಸಲು ಕರ್ನಾಟಕ ಪೊಲೀಸರು ಸಲ್ಲಿಸಿದ್ದ ಅರ್ಜಿಯ ಮೇಲೆ ಸುಪ್ರೀಂ ಕೋರ್ಟ್ ಇಂದು (ಆಗಸ್ಟ್ 14) ತೀರ್ಪು ನೀಡಲಿದೆ.
ಸದ್ಯ ಸುಪ್ರೀಂ ಕೋರ್ಟ್ ಜಾಮೀನು ಮುಂದುವರಿಸುತ್ತದೆಯೇ ಅಥವಾ ರದ್ದುಪಡಿಸುತ್ತದೆಯೇ ಎಂಬ ಕುತೂಹಲ ಮೂಡಿದೆ. ನಟ ದರ್ಶನ್ ತಮ್ಮ ಜಾಮೀನು ಮುಂದುವರಿಯುವ ನಿರೀಕ್ಷೆಯಲ್ಲಿದ್ದಾರೆ.
ಪ್ರಕರಣದ ಎ-2 ಆರೋಪಿಯಾಗಿರುವ ದರ್ಶನ್ ಹಾಗೂ ‘ಡಿ’ ಗ್ಯಾಂಗ್‌ಗೆ ಹೈಕೋರ್ಟ್ ಜಾಮೀನು ನೀಡಿದ್ದನ್ನು ರಾಜ್ಯ ಪೊಲೀಸ್ ಇಲಾಖೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್ ಆದೇಶ ಕಾಯ್ದಿರಿಸಿತ್ತು.