ದರ್ಶನ್ ಸಾರಥಿಗೆ ಹತ್ತು ವರ್ಷಗಳ ಸಂಭ್ರಮ

Date:

ಸ್ಯಾಂಡಲ್ ವುಡ್ ನ ಡಿ ಬ್ರದರ್ಸ್ ಗೆ ಇಂದು ವಿಶೇಷವಾದ ದಿನ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ, ದಿನಕರ್ ತೂಗುದೀಪ ನಿರ್ದೇಶನದಲ್ಲಿ ಬಂದ ಸಾರಥಿ ಸಿನಿಮಾ ರಿಲೀಸ್ ಆದ ದಿನವಿದು. ಚಾಲೆಂಜಿಂಗ್ ಸ್ಟಾರ್ ಸಿನಿ ಜೀವನಕ್ಕೆ ಹೊಸ ತಿರುವು ಕೊಟ್ಟ ಸೂಪರ್ ಹಿಟ್ ಸಿನಿಮಾವಿದು. 2011ರಲ್ಲಿ ರಿಲೀಸ್ ಆದ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು.

ಈ ಸೂಪರ್ ಹಿಟ್ ಸಿನಿಮಾಗೆ ಈಗ 10 ವರ್ಷದ ಸಂಭ್ರಮ. ಇನ್ನೇನು ದರ್ಶನ್ ಸಿನಿಮಾ ಕರಿಯರ್ ಮುಗಿತೇ ಹೋಯಿತು ಎಂದು ಇಡೀ ಗಾಂಧಿನಗರ ಮಾತನಾಡಿಕೊಳ್ಳುತ್ತಿದ್ದ ಸಮಯದಲ್ಲಿ ಬಂದ ‘ಸಾರಥಿ’ ಸಿನಿಮಾ ಡಿ ಬಾಸ್ ರನ್ನ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿತು. ‘ಸಾರಥಿ’ಯನ್ನು ಅಭಿಮಾನಿಗಳು ತಲೆಮೇಲೆ ಹೊತ್ತು ಮೆರವಣಿಗೆ ಮಾಡಿದ್ರು. ಆ ನಂತರ ಬಂದ ಚಾಲೆಂಜಿಂಗ್ ಸ್ಟಾರ್ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡಿದವು.

 

ಈ ಸಿನಿಮಾದಲ್ಲಿ ದರ್ಶನ್ ಆಟೋ ಸಾರಥಿಯಾಗಿ ಕಾಣಿಸಿಕೊಂಡಿದ್ದಾರೆ. ರಾಜ ಅನ್ನೋ ಪಾತ್ರದಲ್ಲಿ ಮಿಂಚಿದ್ದ ದರ್ಶನ್ ಅಭಿಮಾನಿಗಳ ಮನಗೆದ್ದಿದರು. ಚಿತ್ರದ ಮೇಕಿಂಗ್, ಪವರ್ ಪುಲ್ ಪಂಚಿಂಗ್ ಡೈಲಾಗ್ಸ್, ಲವ್ ಸ್ಟೋರಿ, ಫ್ಲ್ಯಾಶ್ ಬ್ಯಾಕ್ ಕಥೆ ಎಲ್ಲವೂ ಚಿತ್ರಪ್ರಿಯರಿಗೆ ತುಂಬಾ ಇಷ್ಟವಾಗಿತ್ತು. ಚಿತ್ರದಲ್ಲಿ ನಾಯಕಿಯಾಗಿ ದೀಪಾ ಸನ್ನಿಧಿ ಕಾಣಿಸಿಕೊಂಡಿದ್ದರು. ದೀಪಾ ನಟನೆಯ ಮೊದಲ ಸಿನಿಮಾ ಇದಾಗಿದ್ದು, ಚೊಚ್ಚಲ ಚಿತ್ರದಲ್ಲೇ ದೊಡ್ಡ ಸಕ್ಸಸ್ ಕಂಡಿದ್ದರು.

ಇದೀಗ ಸಾರಥಿ 10 ವರ್ಷ ತುಂಬಿರುವ ಖುಷಿಯನ್ನು ಡಿ ಬಾಸ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಡಿ ಬ್ರದರ್ಸ್ ಮತ್ತೊಂದು ಸೂಪರ್ ಹಿಟ್ ಸಿನಿಮಾವನ್ನು ಆದಷ್ಟು ಬೇಗ ಮಾಡಲಿ ಎಂದು ಹರಿಸುತ್ತಿದ್ದಾರೆ. ದರ್ಶನ್ ಕ್ರಾಂತಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಸಿನಿಮಾದ ಟೈಟಲ್ ಅನೌನ್ಸ್ ಮಾಡಲಾಗಿದೆ. ಚಿತ್ರಕ್ಕೆ ಶೈಲಜಾ ನಾಗ್ ಬಂಡವಾಳ ಹೂಡುತ್ತಿದ್ದು, ಹರಿಕೃಷ್ಣ ಆಕ್ಷನ್ ಕಟ್ ಹೇಳುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹ್ಯಾಂಡಸಮ್ ಟೀಚರ್ ಅಂಡ್...

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಬೆಂಗಳೂರು: ಬೆಂಗಳೂರು...

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...