ದಲಿತರ ಮೇಲೆ ದೌರ್ಜನ್ಯ ದಬ್ಬಾಳಿಕೆ ನಡೆಸಿರುವುದು ಸರಿಯಲ್ಲ

0
176

ಸಚಿವ ಸುಧಾಕರ್ ಅವರು ತಮ್ಮ ವಿರುದ್ದ ಕೇಳಿ ಬಂದಿರುವ ಆರೋಪಗಳಿಗೆ ಕಾನೂನು ರೀತಿ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ದಲಿತರ ಮೇಲೆ ದೌರ್ಜನ್ಯ ದಬ್ಬಾಳಿಕೆ ನಡೆಸಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರಿಂದ ಜಾತಿ ನಿಂದನೆ ಆಗಿದ್ದರೆ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ, ದೌರ್ಜನ್ಯ ದಬ್ಬಾಳಿಕೆ ನಡೆಸಿರುವುದು ಸರಿಯಲ್ಲ. ಈ ಪ್ರಕರಣದಲ್ಲಿ ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯಬಾರದು.
ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಸಾಮಾನ್ಯ ಜನರನ್ನು ಹೇಗೆ ಪೊಲಿಸ್ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಾರೋ, ಅದೇ ರೀತಿ ಸಚಿವರನ್ನು ವಿಚಾರಣೆ ನಡೆಸಬೇಕು. ಪೊಲಿಸರು ಒತ್ತಡಕ್ಕೆ ಮಣಿದರೆ, ರಾಜ್ಯದ ದಲಿತರು ಸರ್ಕಾರದ ವಿರುದ್ದ ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ ನಾಯಕರು ಭಾಷಣದಲ್ಲಿ ಮಾತ್ರ ದಲಿತರ ಪರ ಮಾತನಾಡುತ್ತಾರೆ. ಆದರೆ, ಅವರ ಸಚಿವರ ನಡವಳಿಕೆ ಸಂಪೂರ್ಣ ದಲಿತ ವಿರೋಧಿಯಾಗಿದೆ. ಗ್ಯಾರೆಂಟಿ ಯೋಜನೆಗಳಿಗೆ ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂ. ಬಳಕೆ ಮಾಡಿಕೊಳ್ಳುತ್ತಿದ್ದಾರೆ. ದಲಿತರು ಇವರನ್ನು ಕ್ಷಮಿಸುವುದಿಲ್ಲ ಎಂದರು.