ದಸರಾ ಆನಂದಿಸಲು ಮೈಸೂರಿಗೆ ಹೋಗುವವರೇ ಈ ವಿಷಯಗಳನ್ನು ತಿಳಿಯಿರಿ

1
53

ಮೈಸೂರು ದಸರಾ 2021ರ ಸಿದ್ಧತೆಗಳು ನಡೆಯುತ್ತಿವೆ. ಅಕ್ಟೋಬರ್ 7 ರಿಂದ 15ರ ತನಕ ಈ ಬಾರಿಯ ದಸರಾ ನಡೆಯಲಿದೆ. ಕೋವಿಡ್ ಕಾರಣದಿಂದಾಗಿ ಈ ಬಾರಿಯೂ ಸರಳವಾಗಿ ದಸರಾ ಮಹೋತ್ಸವ ನಡೆಯಲಿದೆ.

ಮೈಸೂರು ಅರಮನೆಯಲ್ಲಿ ದಸರಾ 2021ರ ಪ್ರಯುಕ್ತ ಮೈಸೂರು ರಾಜಮನೆತನದವರು ಅರಮನೆ ಒಳ ಆವರಣದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನಡೆಸುವುದರಿಂದ ಪ್ರವಾಸಿಗರಿಗೆ ಅರಮನೆ ಭೇಟಿಯನ್ನು ನಿರ್ಬಂಧಿಸಲಾಗಿದೆ. ಅಕ್ಟೋಬರ್ 1, 7, 14, 15, 31ರಂದು ಅರಮನೆ ವೀಕ್ಷಣೆಗೆ ಪ್ರವಾಸಿಗರು ಭೇಟಿ ನೀಡುವಂತಿಲ್ಲ ಎಂದು ಮೈಸೂರು ಅರಮನೆ ಮಂಡಳಿಯ ಉಪನಿರ್ದೇಶಕರು ತಿಳಿಸಿದ್ದಾರೆ. ಅಕ್ಟೋಬರ್ 1 ಶುಕ್ರವಾರ ಸಿಂಹಾಸನ ಜೋಡಣೆ ಪ್ರಯುಕ್ತ ಬೆಳಗ್ಗೆ 10 ರಿಂದ ಮಧ್ಯಾಹ್ನ 1ರ ವರೆಗೆ ಪ್ರವೇಶವಿರುವುದಿಲ್ಲ.

 

ಅಕ್ಟೋಬರ್ 7ರ ಗುರುವಾರ ಖಾಸಗಿ ದರ್ಬಾರ್‌ನಲ್ಲಿ ರಾಜವಂಶಸ್ಥರ ಧಾರ್ಮಿಕ ಪೂಜೆಯ ಪ್ರಯುಕ್ತ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ತನಕ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ. ಅಕ್ಟೋಬರ್14ರ ಗುರುವಾರ ಆಯುಧ ಪೂಜೆ ಪ್ರಯುಕ್ತ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ಪ್ರವೇಶವಿಲ್ಲ.

 

ಅಕ್ಟೋಬರ್ 15ರ ಶುಕ್ರವಾರ ವಿಜಯದಶಮಿಯ ಪ್ರಯುಕ್ತ ಸಂಪೂರ್ಣ ದಿನ ಪ್ರವಾಸಿಗರು ಮೈಸೂರು ಅರಮನೆಗೆ ಭೇಟಿ ನೀಡುವಂತಿಲ್ಲ. ಅಕ್ಟೋಬರ್ 31ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1ರ ವರೆಗೆ ಸಿಂಹಾಸನ ವಿಸರ್ಜನೆ ಪ್ರಯುಕ್ತ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

2021ನೇ ಸಾಲಿನ ಮೈಸೂರು ದಸರಾ ಅಕ್ಟೋಬರ್ 7ರಿಂದ 15ರ ತನಕ ನಡೆಯಲಿದೆ. ಅಕ್ಟೋಬರ್ 7ರ ಬೆಳಗ್ಗೆ 8.15ರಿಂದ 8.45ರ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ದಸರಾ ಉದ್ಘಾಟನೆ ಮಾಡಲಿದ್ದಾರೆ.

1 COMMENT

LEAVE A REPLY

Please enter your comment!
Please enter your name here