ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ!
ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಫಲಪುಷ್ಪ ಪ್ರದರ್ಶನವನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಉದ್ಘಾಟಿಸಿದರು. ಈ ಬಾರಿ ವಿಶೇಷವಾಗಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಯುವನಿಧಿ, ಗೃಹಜ್ಯೋತಿ, ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮೀ ಯೋಜನೆಗಳ ವಿಷಯಾಧಾರಿತವಾದ ಪುಷ್ಪ ಕಲಾಕೃತಿ ಮಾದರಿಗಳನ್ನು ಪ್ರೇಕ್ಷಕರು ನೋಡಬಹುದಾಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಮೈಸೂರಿನಲ್ಲಾದಂತಹ ಭದ್ರಾವತಿ ಕಾರ್ಖಾನೆ, ಶಿವನಸಮುದ್ರ ವಿದ್ಯುತ್ ಉತ್ಪಾದನೆ, ಮೈಸೂರು ವಿಶ್ವವಿದ್ಯಾಲಯ, ಹಾಗೂ ಮೈಸೂರು ಆಕಾಶವಾಣಿ ಸೇರಿದಂತೆ ಅಭಿವೃದ್ಧಿ ಸಾಧನೆಗಳ ಕುರಿತ ಪುಷ್ಪಗಳ ಮದ್ಯೆ ಇದ್ದಂತಹ ಚಿತ್ರ ಪ್ರದರ್ಶನ ನೋಡುಗರನ್ನು ಆಕರ್ಷಿಸಲಿದೆ. ಈ ಬಾರಿ ಭಾರತದ ಮೊದಲ ಮಹಿಳಾ ಶಿಕ್ಷಕಿ, ಹೆಣ್ಣು ಮಕ್ಕಳಿಗೆ ಶಿಕ್ಷಣ ಕ್ರಾಂತಿಯ ಬಗ್ಗೆ ಬೆಳಕು ಚೆಲ್ಲಿದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ, ಒಂದೇ ಮಾನವನ ದೇಹದಲ್ಲಿ ಅರ್ಧಭಾಗ ರೈತ ಇನ್ನರ್ಧ ಭಾಗ ಗಡಿ ಕಾಯುವ ಸೈನಿಕನ ಮಾದರಿ ಬಹಳ ವಿಶೇಷವಾಗಿದೆ.