ದಾಂಪತ್ಯಕ್ಕೆ ಕಾಲಿಟ್ಟ ಸರಿಗಮಪ ಖ್ಯಾತಿಯ ಶೀಹರ್ಷ ! ಬಾಳಸಂಗಾತಿ ಯಾರ್ ಗೊತ್ತಾ?

Date:

ಕನ್ನಡ ಕಿರುತೆರೆಯ ಜನಪ್ರಿಯ ಸಿಂಗಿಂಗ್ ರಿಯಾಲಿಟಿ ಶೋ ‘ಸರಿಗಮಪ’ ಕಾರ್ಯಕ್ರಮದಲ್ಲಿ ಸ್ಪರ್ಧಿಸಿ, ಜನರ ಮನೆ ಮನ ಗೆದ್ದಿದ್ದ ಶ್ರೀಹರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶೃಂಗೇರಿ ಮೂಲದ ಗೌತಮಿ ಎಂಬುವರನ್ನು ಶ್ರೀಹರ್ಷ ಮದುವೆಯಾಗಿದ್ದಾರೆ.
ಕೋವಿಡ್ ಲಾಕ್‌ಡೌನ್ ಇರುವ ಕಾರಣ ತಮ್ಮ ಸ್ವಗ್ರಾಮದಲ್ಲೇ ಶ್ರೀಹರ್ಷ-ಗೌತಮಿ ವಿವಾಹ ಮಹೋತ್ಸವ ನಡೆದಿದೆ. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಸರಳವಾಗಿ, ಶಾಸ್ತ್ರೋಕ್ತವಾಗಿ ಶ್ರೀಹರ್ಷ ಮತ್ತು ಗೌತಮಿ ವೈವಾಹಿಕ ಬದುಕಿಗೆ ನಾಂದಿ ಹಾಡಿದ್ದಾರೆ.


ಕರ್ನಾಟಕ ಶಾಸ್ತ್ರೀಯ ಸಂಗೀತ, ಭಕ್ತಿಗೀತೆ, ಜಾನಪದ ಹಾಡುಗಳನ್ನು, ಚಿತ್ರಗೀತೆಗಳನ್ನು ಹಾಡುವುದರಲ್ಲಿ ಶ್ರೀಹರ್ಷ ಎತ್ತಿದ ಕೈ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಶ್ರೀಹರ್ಷ ಇದೀಗ ವಿವಾಹ ಬಂಧನಕ್ಕೊಳಗಾಗಿದ್ದಾರೆ. ಶ್ರೀಹರ್ಷ-ಗೌತಮಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ಅಂದ್ಹಾಗೆ, ‘ಸರಿಗಮಪ’ ಸೀಸನ್ 13 ಕಾರ್ಯಕ್ರಮದಲ್ಲಿ ಶ್ರೀಹರ್ಷ ಅಂತಿಮ ಘಟ್ಟ ತಲುಪಿದ್ದರು. ಗ್ರ್ಯಾಂಡ್ ಫಿನಾಲೆಯಲ್ಲಿ ಶ್ರೀಹರ್ಷ ಮೂರನೇ ಸ್ಥಾನ (ಎರಡನೇ ರನ್ನರ್ ಅಪ್) ಆಗಿ ಹೊರಹೊಮ್ಮಿದ್ದರು. ಗಾಯಕ ಶ್ರೀಹರ್ಷ ಅನೇಕ ಅಭಿಮಾನಿಗಳನ್ನು ಹೊಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...