ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಸ್ ನಾರಾಯಣ್ ಪುತ್ರ

Date:

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಎಸ್​. ನಾರಾಯಣ್​ ಅವರ ಮನೆಯಲ್ಲಿ ಶುಭ ಸಮಾರಂಭ ನೆರವೇರಿದೆ. ಅವರ ಪುತ್ರ ಪಂಕಜ್​ ನಾರಾಯಣ್​ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲವೇ ದಿನಗಳ ಹಿಂದೆ ರಕ್ಷಾ ಜೊತೆ ಪಂಕಜ್​ ಅವರ ನಿಶ್ಚಿತಾರ್ಥ ನೆರವೇರಿತ್ತು.

ಈಗ ಮೈಸೂರಿನಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ. ಕೇವಲ ಆಪ್ತರ ಸಮ್ಮುಖದಲ್ಲಿ ಮದುವೆ ನಡೆದಿದ್ದು, ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಕೆಲವು ಗಣ್ಯರು ನವ ದಂಪತಿಗೆ ಆಶೀರ್ವಾದ ಮಾಡಿದ್ದಾರೆ. ಪಂಕಜ್​ ಮತ್ತು ರಕ್ಷಾ ಮದುವೆಯ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸೆಲೆಬ್ರಿಟಿ ವಿವಾಹ ಸಮಾರಂಭ ಅದ್ದೂರಿಯಾಗಿ ನಡೆಯಬೇಕಿತ್ತು. ಆದರೆ ಕೊವಿಡ್ ಹರಡುವ ಭಯ, ಪುನೀತ್​ ರಾಜ್​ಕುಮಾರ್ ನಿಧನದ ನೋವು ಸೇರಿದಂತೆ ಹಲವು ಕಾರಣಗಳಿಂದಾಗಿ ಸಿಂಪಲ್​ ಆಗಿ ಮದುವೆ ಮಾಡಲಾಗಿದೆ.

ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್​ನಲ್ಲಿ ಮದುವೆ ಸಮಾರಂಭ ಏರ್ಪಡಿಸಲಾಗಿತ್ತು. ಮಾಜಿ ಸಚಿವ ಎನ್​. ಚೆಲುವರಾಯಸ್ವಾಮಿ ಸೇರಿದಂತೆ ಅನೇಕರು ಆಗಮಿಸಿದ್ದರು. ಅಭಿಮಾನಿಗಳು ಕೂಡ ಸೋಶಿಯಲ್​ ಮೀಡಿಯಾ ಮೂಲಕ ನವ ದಂಪತಿಗೆ ಶುಭ ಹಾರೈಸುತ್ತಿದ್ದಾರೆ.

ಚಿತ್ರರಂಗದಲ್ಲಿ ಎಸ್​. ನಾರಾಯಣ್​ ಹೊಂದಿರುವ ಅನುಭವ ಅಪಾರ. ನಟನಾಗಿ, ನಿರ್ದೇಶಕನಾಗಿ ಅವರು ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದ ಖ್ಯಾತಿ ಗಳಿಸಿದ್ದಾರೆ. ಅವರ ಮಕ್ಕಳು ಕೂಡ ಸಿನಿಮಾರಂಗದಲ್ಲಿ ತೊಡಗಿಕೊಂಡಿದ್ದಾರೆ. ಮೊದಲ ಪುತ್ರ ಪವನ್​ ನಿರ್ದೇಶನದಲ್ಲಿ ಆಸಕ್ತಿ ಹೊಂದಿದ್ದಾರೆ. ಎರಡನೇ ಪುತ್ರ ಪಂಕಜ್​ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಚೆಲುವಿನ ಚಿಲಿಪಿಲಿ’, ‘ದುಷ್ಟ’, ‘ದಕ್ಷ’, ‘ಒಡೆಯ’ ಮುಂತಾದ ಚಿತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್ ಬೆಳಗಾವಿ: ಧಾರವಾಡ ಜಿಲ್ಲೆಯ...

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ ಬೆಳಗಾವಿ: ಮಾನ್ಯ ಮುಖ್ಯಮಂತ್ರಿಗಳೇ,...

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್ ಕುಮಾರಸ್ವಾಮಿ

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್...

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿ: ಕಾಂಗ್ರೆಸ್ ಕುಟುಂಬದವರನ್ನು...