ದಾಖಲೆ ಇಲ್ಲದೇ ಸುಖಾಸುಮ್ಮನೆ ಆರೋಪ ಮಾಡಬೇಡಿ: ಯತೀಂದ್ರ ಸಿದ್ದರಾಮಯ್ಯ

Date:

ಮೈಸೂರು: ವಿವೇಕಾನಂದ ಯಾರು? ಅದು ನನಗೆ ಈಗಲೂ ಗೊತ್ತಿಲ್ಲ. ವಿವೇಕಾನಂದರ ವರ್ಗಾವಣೆ ಎಲ್ಲಿಗೆ ಆಗಿದೆ? ಆ ಕ್ಷೇತ್ರದ ವ್ಯಾಪ್ತಿ ಯಾವುದು? ಅದರ ಬಗ್ಗೆ ಕ್ಷೇತ್ರದ ಶಾಸಕರನ್ನ ಕೇಳಿಕೊಳ್ಳಿ. ಅದಕ್ಕೂ ನನಗೂ ಏನೂ ಸಂಬಂಧ ಎಂದು ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ವಿಡಿಯೋ ವೈರಲ್ ಬಗ್ಗೆ ಮೈಸೂರಿನಲ್ಲಿ ಮೊದಲ ಬಾರಿಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಪಗಳನ್ನು ಮಾಡುವಾಗ ದಾಖಲೆ ಇಟ್ಟು ಆರೋಪ ಮಾಡಲಿ. ದಾಖಲೆ ಇಲ್ಲದೇ ಸುಖಾಸುಮ್ಮನೆ ಆರೋಪ ಮಾಡಬೇಡಿ. ನಾನು ನನ್ನ ಪಾಡಿಗೆ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ. ಅನಗತ್ಯವಾಗಿ ಎಲ್ಲಾ ವಿಚಾರದಲ್ಲಿ ನನ್ನ ಹೆಸರನ್ನ ಡ್ರ್ಯಾಗ್ ಮಾಡಬೇಡಿ ಎಂದರು.
ನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ. ನಾನು ಹತ್ತಾರು ವಿಚಾರಗಳ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ. ಈಗ ನಾನು ದುಡ್ಡಿನ ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು. ಆದರೂ ಈಗ ಅದರ ಬಗ್ಗೆ ಸ್ಪಷ್ಟೀಕರಣ ಕೊಡುತ್ತಿದ್ದೇನೆ. ನಾನು ಅವತ್ತು ಮಾತನಾಡಿರುವುದು ಸಿಎಸ್ಆರ್ ಫಂಡ್ ವಿಚಾರದ ಬಗ್ಗೆ. ಲಿಸ್ಟ್ ಎಂದ ಕೂಡಲೇ ಅದನ್ನು ವರ್ಗಾವಣೆಗೆ ಯಾಕೆ ತೆಗೆದುಕೊಂಡು ಹೋಗುತ್ತಾರೆ ಎಂದು ಪ್ರಶ್ನಿಸಿದರು. ಇವರ ಅವಧಿಯಲ್ಲಿ ಲಿಸ್ಟ್ ಎಂದರೆ ವರ್ಗಾವಣೆ ಎಂದರೇ ಅದು ದಂಧೆಯಾಗಿತ್ತಾ? ಇವರ ಪತ್ನಿ, ಮಗ ಮತ್ತು ಇಡೀ ಕುಟುಂಬವೇ ರಾಜಕಾರಣದಲ್ಲಿದೆ.
ಅವರ ಮೇಲೂ ನಾವೂ ಅದೇ ರೀತಿ ಮಾತನಾಡಲು ಆಗುತ್ತಾ? ಹಾಗಾದರೇ ಇವರ ಅವಧಿಯಲ್ಲಿ ಮಾಡಿದ ವರ್ಗಾವಣೆಯೆಲ್ಲಾ ದಂಧೆಯೇ? ಹಣ ಪಡೆದೇ ವರ್ಗಾವಣೆ ಮಾಡಿದ್ದಾರಾ? ನನಗೆ ವರುಣ ಕ್ಷೇತ್ರದ ಜವಾಬ್ದಾರಿ ಇದೆ. ಆಡಳಿತಾತ್ಮಕವಾಗಿ ವರ್ಗಾವಣೆ ಮಾಡಿಸಿದರೂ ಅದರಲ್ಲಿ ತಪ್ಪೇನಿದೆ? ಎಲ್ಲಾ ವರ್ಗಾವಣೆಯನ್ನೂ ಇವರು ಹಣದ ದೃಷ್ಟಿಯಲ್ಲಿ ನೋಡಿದರೇ ಇವರು ಅದೇ ಕೆಲಸ ಮಾಡುತ್ತಿದ್ದರು ಎಂದು ಅರ್ಥ ಅಲ್ವಾ ಎಂದು ಹರಿಹಾಯ್ದರು̤

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...