ದಾವಣಗೆರೆ ಜಿಲ್ಲೆಯಲ್ಲಿ ಉದ್ಯೋಗಾವಕಾಶ

Date:

ರಾಷ್ಟ್ರೀಯ ಆಯುಷ್ ಅಭಿಯಾನದಡಿ ದಾವಣಗೆರೆ ಜಿಲ್ಲೆಯಲ್ಲಿ ‘ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ’ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 22ರ ಸಂಜೆ 5.30ರ ತನಕ ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಆಯುಷ್ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಪ್ರತಿ ಜಿಲ್ಲೆಗೆ ತಲಾ 1ರಂತೆ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರ ಹುದ್ದೆ ಭರ್ತಿ ಮಾಡಲಾಗುತ್ತದೆ. ಹುದ್ದೆ ಅವಧಿ 2022ರ ಮಾರ್ಚ್ 31ರವೆರೆಗೆ ಇದ್ದು, ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟಿರುತ್ತದೆ.
ಅರ್ಜಿಗಳನ್ನು ಸಲ್ಲಿಸುವವರು ಎಐಸಿಟಿಇ ಮಾನ್ಯತೆ ಪಡೆದ ಎಂಬಿಎ ಮತ್ತು ಸ್ನಾತಕೋತ್ತರ ಪದವಿ, ಎಐಸಿಟಿಇ ಮಾನ್ಯತಾ ಸಂಸ್ಥೆಯಿಂದ ಡಿಪ್ಲೊಮೋ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ, ಎಂ. ಎಸ್. ಆಫೀಸ್, ಎಂ. ಎಸ್. ವರ್ಡ್, ಪವರ್ ಪಾಯಿಂಟ್ ಮತ್ತು ಎಕ್ಸೆಲ್‍ನ ಜ್ಞಾನ ಹೊಂದಿರಬೇಕು.


ಅಭ್ಯರ್ಥಿಗಳು ಕನಿಷ್ಠ 3 ವರ್ಷ ಸಾರ್ವಜನಿಕ ಆರೋಗ್ಯ ಕಾರ್ಯಕ್ರಮಗಳಲ್ಲಿ ಕೆಲಸ ಮಾಡಿದ ಅನುಭವವಿರಬೇಕು. ಆಯುಷ್ ಸೇರಿದಂತೆ ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವವಿರಬೇಕು. ಈ ಹುದ್ದೆಗೆ ಮಾಸಿಕ 30,000 ರೂ. ಸಂಭಾವನೆ ನಿಗದಿ ಮಾಡಲಾಗಿದೆ.


ಅರ್ಜಿಗಳನ್ನು ಸಲ್ಲಿಸಲು ವಿಳಾಸ; ಜಿಲ್ಲಾ ಆಯುಷ್ ಕಚೇರಿ, ಪಂಚಾಯತ್‍ರಾಜ್ ಕಾರ್ಯಪಾಲಕ ಇಂಜಿನಿಯರಿಂಗ್ ವಿಭಾಗೀಯ ಕಚೇರಿಯ ಆವರಣ, ಪಿ.ಬಿ.ರಸ್ತೆ ದಾವಣಗೆರೆ -577001.
ಭರ್ತಿ ಮಾಡಿದ ಅರ್ಜಿಯ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ಜುಲೈ 22ರ ಸಂಜೆ 5.30ರೊಳಗಾಗಿ ಅಂಚೆಮೂಲಕ ಅಥವಾ ಖುದ್ದಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ 08192-221129ಕ್ಕೆ ಸಂಪರ್ಕಿಸಬಹುದು.

Share post:

Subscribe

spot_imgspot_img

Popular

More like this
Related

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...