ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ರಾಜ್ಯದಲ್ಲಿ ಸುಖ-ಶಾಂತಿ, ನೆಮ್ಮದಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ಮಾತುಕತೆ ನಡೆಸಿದರು. ರಾಜ್ಯದಲ್ಲಿ ಮಳೆಯಿಂದಾದ ಹಾನಿ ಹಾಗೂ ಜನರ ಸಂಕಷ್ಟಗಳ ಬಗ್ಗೆ ಮಾತನಾಡಿದರು .