ದಿನೇಶ್ ಪತ್ನಿಯಿಂದ ಯತ್ನಾಳ್ ವಿರುದ್ಧ ದೂರು ದಾಖಲು

Date:

ಬೆಂಗಳೂರು: ಸಚಿವ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ಧ ದಿನೇಶ್ ಪತ್ನಿ ಟಬು ರಾವ್ ದೂರು ನೀಡಿದ್ದಾರೆ. ಸಂಜಯನಗರ ಪೊಲೀಸ್ ಠಾಣೆಗೆ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ದೂರು ನೀಡಿದ್ದಾರೆ. ಇದಕ್ಕೂ ಮುಂಚೆ ಟಬು ರಾವ್ ಅವರು ಶಾಸಕ ಯತ್ನಾಳ್ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಬಿಜೆಪಿ ನಾಯಕರಿಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಮನವಿ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ದೂರು ನೀಡಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಟಬು ರಾವ್, ಬಸನಗೌಡ ಪಾಟೀಲ್ ಯತ್ನಾಳ್ ಯಾರು ನನಗೆ ಗೊತ್ತಿಲ್ಲ. ನಾನು ರಾಜಕೀಯದಲ್ಲಿಲ್ಲ, ನನಗೇಕೆ ಹೀಗೆ ಹೇಳಿದ್ದಾರೆ ಗೊತ್ತಿಲ್ಲ. ಈ ರೀತಿ ಮಾತನಾಡೋದೆ ರಾಜಕೀಯನಾ ಎಂದು ಪ್ರಶ್ನೆ ಮಾಡಿದ್ದಾರೆ. ಭಾರತ ಮಾತೆ ಅಂತಾರೆ, ಇದೇನಾ ಇವರು ಕೊಡುವ ಗೌರವ? ಸಂಜಯನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದೇವೆ. ನಾನು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ. ದಿನೇಶ್ ಬಗ್ಗೆ ಮಾತನಾಡಿದರೆ ಪರ್ವಾಗಿಲ್ಲ, ನಮ್ಮ ಬಗ್ಗೆ ಏಕೆ ಎಂದು ವಾಗ್ದಾಳಿ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...