ದೀಪಾವಳಿ ಹಬ್ಬ: ಊರುಗಳಿಗೆ ಹೊರಟ ಜನ, ಬೆಂಗಳೂರಿನ ಹಲವೆಡೆ ಫುಲ್ ಟ್ರಾಫಿಕ್!
ಬೆಂಗಳೂರು:- ದೀಪಾವಳಿ ಹಬ್ಬಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ನಗರದಲ್ಲಿ ವಾಸವಿದ್ದ ಜನ, ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ.
ಹೀಗಾಗಿ ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಮತ್ತು ಹೊರ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಸಂಚಾರ ದಟ್ಟಣೆಯಲ್ಲಿ ಸಿಲುಕಿ ವಾಹನ ಸವಾರರು ಗಂಟೆಗಟ್ಟಲೇ ರಸ್ತೆಗಳಲ್ಲೇ ನಿಂತಿದ್ದಾರೆ.
ಬೆಂಗಳೂರು ನಗರದಿಂದ ಹೊರ ಹೋಗುವ ತುಮಕೂರು, ಮೈಸೂರು, ಹೊಸೂರು ಮತ್ತು ಬಳ್ಳಾರಿ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ನಿಧಾನಗತಿಯ ಸಂಚಾರವಿದೆ. ಪೀಣ್ಯ ಮೇಲ್ಸೇತುವೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ಗೊರಗುಂಟೆಪಾಳ್ಯ ಕಡೆಗೆ ನಿಧಾನಗತಿಯ ಸಂಚಾರವಿದ್ದು ವಾಹನ ಸವಾರರು ಸಹಕರಿಸಬೇಕೆಂದು ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ
ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ತಮ್ಮ ಊರುಗಳಿಗೆ ತೆರಳುತ್ತಿದ್ದು ಕೆಎಸ್ಆರ್ಟಿಸಿ ವತಿಯಿಂದ ಹೆಚ್ಚುವರಿ ಬಸ್ ಹೋಗುವ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆಯಾಗಿದೆ. ಹೀಗಾಗಿ ಸಾರ್ವಜನಿಕರು ಬದಲಿ ರಸ್ತೆ ಮೂಲಕ ತೆರಳಲುವಂತೆ ಬೆಂಗಳೂರು ಸಂಚಾರಿ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್ ಮುಖಾಂತರ ಸೂಚನೆ ನೀಡಿದ್ದಾರೆ.