ಬೆಂಗಳೂರು: ಬೆಂಗಳೂರಿನ ಇಂದಿರಾನಗರದ ಪ್ರಸಿದ್ಧ ಹೊಟೆಲ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಇದರಿಂದ ಈ ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಪೋಟವಾಗುತ್ತಿದ್ದಂತೆಯೇ ಜನರು ಭಯಭೀತರಾಗಿ ಓಡಿಡಾಡಿದ್ದು,
ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ನಿಗೂಢ ಸ್ಫೋಟದ ವೇಳೆ ಭಾರಿ ಪ್ರಮಾಣದ ಶಬ್ಧವಾಗಿದೆ. ಇದರಿಂದ ಜನರು ಒಂದು ಕ್ಷಣ ಭಯಭೀತರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿದ್ದು ಬೆಂಕಿ ನಂದಿಸಿದ್ದಾರೆ. ಸದ್ಯ ಎಚ್ಎಎಲ್ ಪೊಲೀಸರು ಸ್ಫೋಟದಲ್ಲಿ ಸಿಕ್ಕ ಐಡಿ ಕಾರ್ಡ್ ಆಧರಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.