ದುಪ್ಪಟ್ಟು ಹಣ ಪಡೆದು ಗೊಬ್ಬರ ಮಾರಾಟ: ಅಂಗಡಿ ಮೇಲೆ ದಾಳಿ!
ಕಲಬುರ್ಗಿ:- ಜಿಲ್ಲೆಯ ರೈತರಿಂದ ದುಪ್ಪಟ್ಟು ಹಣ ಪಡೆದು ಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಅಂಗಡಿ ಮಾಲೀಕನಿಗೆ ನೋಟಿಸ್ ನೀಡಿದ್ದಾರೆ.
ಅಫಜಲಪುರ ತಾಲೂಕಿನ ಗಾಣಗಾಪುರದ ಶ್ರೀ ರೇವಣಸಿದ್ದೇಶ್ವರ ಅಗ್ರೋ ಏಜೆನ್ಸಿಯ ಗೊಬ್ಬರದ ಅಂಗಡಿ ಮಾಲೀಕ, ಗೊಬ್ಬರ ಹಾಗೂ ಇತರೆ ವಸ್ತುಗಳನ್ನು ಎಂಆರ್‌ಪಿ ದರಕ್ಕಿಂತ ಎರಡು ಪಟ್ಟು ಜಾಸ್ತಿ ಬೆಲೆಗೆ ರೈತರಿಗೆ ಮಾರಾಟ ಮಾಡುತ್ತಿದ್ದಾರೆ.
ಅಲ್ಲದೆ ರೈತರು ಗೊಬ್ಬರದ ಬಿಲ್ ಕೇಳಿದ್ರೆ ನಕಲಿ ಬಿಲ್ ನೀಡುತ್ತಿದ್ದಾರೆ. ಸದ್ಯ ರೈತ ಹಾಗೂ ಅಂಗಡಿ ಮಾಲೀಕರ ವೀಡಿಯೋ ವೈರಲ್ ಆಗುತ್ತಿದ್ದಂತೆ ಕೃಷಿ ಇಲಾಖೆ ಅಧಿಕಾರಿಗಳು ಅಂಗಡಿ ಮೇಲೆ ದಾಳಿ ನಡೆಸಿ ಅಂಗಡಿ ಮಾಲೀಕನಿಗೆ ನೋಟಿಸ್ ನೀಡಿದ್ದಾರೆ.