ದುಬೈ ತಲುಪಿದ ರೋಹಿತ್ ಶರ್ಮಾ, ಬೂಮ್ರಾ

Date:

ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ದ್ವಿತೀಯ ಹಂತದ ಟೂರ್ನಿಗಾಗಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಸೆಪ್ಟೆಂಬರ್‌ 11ರ ಶನಿವಾರ ಅಬುಧಾಬಿಗೆ ತಲುಪಿದ್ದಾರೆ. ವೇಗಿ ಜಸ್‌ಪ್ರೀತ್‌ ಬೂಮ್ರಾ ಮತ್ತು ಬ್ಯಾಟ್ಸ್‌ಮನ್‌ ಸೂರ್ಯಕುಮಾರ್ ಯಾದವ್ ಕೂಡ ರೋಹಿತ್ ಜೊತೆಗಿದ್ದರು. ಅಬುಧಾಬಿಗೆ ಬಂದಿಳಿದ ಮುಂಬೈ ಪ್ರಮುಖ ಆಟಗಾರರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಸ್ವಾಗತಿಸಿದೆ (ಚಿತ್ರಕೃಪೆ: ಮುಂಬೈ ಇಂಡಿಯನ್ಸ್ ಟ್ವಿಟರ್).

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ತಲುಪಿರುವ ರೋಹಿತ್ ಶರ್ಮಾ, ಜಸ್‌ಪ್ರೀತ್‌ ಬೂಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಆರು ದಿನಗಳ ಕಡ್ಡಾಯ ಕ್ವಾರಂಟೈನ್ ಪಾಲಿಸಲಿದ್ದಾರೆ. ಆ ಬಳಿಕ ಮೂವರೂ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಳ್ಳಲಿದ್ದಾರೆ. ಮ್ಯಾನ್ಚೆಸ್ಟರ್ ನಿಂದ ಅಬುಧಾಬಿಗೆ ಹೊರಡುವುದಕ್ಕೂ ಮುನ್ನ ಮೂವರೂ ಕೋವಿಡ್ ಪರೀಕ್ಷೆ ಮಾಡಿಕೊಂಡಿದ್ದು, ಮೂವರ ಫಲಿತಾಂಶವೂ ನೆಗೆಟಿವ್ ಬಂದಿತ್ತು.

ಇಂಗ್ಲೆಂಡ್ ಮತ್ತು ಭಾರತ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿತ್ತು. ಆದರೆ ಕೊನೇ ಟೆಸ್ಟ್‌ ಪಂದ್ಯ ಕೋವಿಡ್-19 ಭೀತಿಯಿಂದಾಗಿ ರದ್ದಾಗಿದ್ದರಿಂದ ಟೆಸ್ಟ್‌ ಸರಣಿಗಾಗಿ ಇಂಗ್ಲೆಂಡ್‌ಗೆ ತೆರಳಿದ್ದ ಭಾರತೀಯ ಆಟಗಾರರು ಐಪಿಎಲ್ ದ್ವಿತೀಯ ಹಂತದ ಟೂರ್ನಿಗಾಗಿ ಯುಎಇಗೆ ಬಂದಿದ್ದಾರೆ. ಮ್ಯಾನ್ಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ನಡೆಯಲಿದ್ದ ಐದನೇ ಟೆಸ್ಟ್‌ ಪಂದ್ಯ ಶುಕ್ರವಾರ (ಸೆಪ್ಟೆಂಬರ್‌ 10) ರದ್ದೆಂದು ಘೋಷಿಸಲ್ಪಟ್ಟಿತ್ತು. ಹೀಗಾಗಿ ಟೆಸ್ಟ್‌ ಸರಣಿಯಲ್ಲಿದ್ದ ರೋಹಿತ್ ಶರ್ಮಾ, ಜಸ್‌ಪ್ರೀತ್‌ ಬೂಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಮೂವರೂ ಯುಎಇಗೆ ಬಂದಿದ್ದಾರೆ. ಟೀಮ್ ಇಂಡಿಯಾದ ಮುಖ್ಯ ಕೋಚ್ ರವಿ ಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಸೇರಿ ಇಬ್ಬರು ಫಿಸಿಯೋಗಳು ಕೋವಿಡ್-19 ಸೋಂಕಿಗೆ ತುತ್ತಾಗಿದ್ದರು ಹೀಗಾಗಿ ಉದ್ದೇಶಿತ ಟೆಸ್ಟ್‌ ಪಂದ್ಯವನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ನಿರ್ಧಾರಕ್ಕೆ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ಮತ್ತು ಇಂಗ್ಲೆಂಡ್ ಆ್ಯಂಡ್ ವೇಲ್ಸ್ ಕ್ರಿಕೆಟ್ ಬೋರ್ಡ್ ಬಂದಿತ್ತು.

Share post:

Subscribe

spot_imgspot_img

Popular

More like this
Related

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...