ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಗೆ ಬೇಟಿ ನೀಡಿದ ಸಂದರ್ಭದಲ್ಲಿ ತಮ್ಮನ್ನು ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲು ಕಾರಣಕರ್ತರಾಗಿದ್ದಕ್ಕೆ ಸೋನಿಯಾರನ್ನು ಬೇಟಿ ಮಾಡಿ ಸಿದ್ದರಾಮಯ್ಯ ಧನ್ಯವಾದ ಸಲ್ಲಿಸಿದ್ದಾರೆ.
ಅಲ್ಲದೇ, ರಾಜ್ಯ ರಾಜಕಾರಣದ ಜೊತೆಗೆ ಮುಂಬರುವ ವಿಧಾನಸಭಾ ಉಪ ಚುನಾವಣೆಯಲ್ಲಿ ಗೆಲುವಿನ ಕಾರ್ಯತಂತ್ರ ರೂಪಿಸಲು ಅನುಸರಿಸಬೇಕಾದ ನಡೆ ಕುರಿತು ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆನ್ನಲಾಗಿದೆ.