ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ

tnit editors
1 Min Read

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟಗೊಂಡಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. ಸದ್ಯ ಎಲ್ಲೆಡೆ ಹೈಅಲರ್ಟ್​ ಘೋಷಿಸಲಾಗಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು,

ಏರ್​ಪೋರ್ಟ್​ಗೆ ಬರುವ & ಹೋಗುವ ವಾಹನಗಳ ಮೇಲೆ‌‌ ಹದ್ದಿನಕಣ್ಣಿಡಲಾಗಿದೆ. ಏರ್ಪೋಟ್ ಭದ್ರತೆಗೆ ಹೆಚ್ಚುವರಿ ಶಸ್ತ್ರ ಸಜ್ಜಿತ ಸಿಐಎಸ್ಎಫ್​ ನಿಯೋಜನೆ ಜೊತೆಗೆ ವಿಮಾನ ನಿಲ್ದಾಣದ ಒಳ & ಹೊರ ಆವರಣದಲ್ಲಿ ಪ್ಯಾಟ್ರೋಲಿಂಗ್ ಗಸ್ತು ಹೆಚ್ಚಳ ಮಾಡಲಾಗಿದೆ. ಏರ್​ಪೋರ್ಟ್​ಗೆ ಬರುವ ಪ್ರಯಾಣಿಕರು, ಸಿಬ್ಬಂದಿಯ ತಪಾಸಣೆ ಮಾಡಲಾಗುತ್ತಿದೆ. ಪಾರ್ಕಿಂಗ್ ಏರಿಯಾ ಸೇರಿ ಎಲ್ಲಡೆ ಭದ್ರತಾ ಪಡೆ ‌ ಅಲರ್ಟ್ ಆಗಿದೆ.

Share This Article