ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌

Date:

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌

ನವದೆಹಲಿ: ಭಾರತದ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ನಡೆದ ಭೀಕರ ಸ್ಫೋಟವು ದೇಶವನ್ನೇ ನಡುಗಿಸಿದೆ. ಈ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಲಖನೌ ಮೂಲದ ವೈದ್ಯೆ ಡಾ. ಶಾಹೀನ್‌ ಶಾಹೀದ್‌ ಳನ್ನ ಅರೆಸ್ಟ್‌ ಮಾಡಲಾಗಿದೆ. ವಿಚಾರಣೆ ವೇಳೆ, ಡಾ. ಶಾಹೀನ್‌ ಶಾಹೀದ್‌ ಜೈಶ್‌-ಎ-ಮೊಹಮ್ಮದ್‌ (ಜೆಎಂಎಂ) ಭಯೋತ್ಪಾದಕ ಸಂಘಟನೆಯ ಮಹಿಳಾ ವಿಭಾಗವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತಿದ್ದಳು ಎಂಬ ಸಂಗತಿ ಬಯಲಾಗಿದೆ.

ಶಾಹೀನ್ ಅಲ್-ಫಲಾಹ್ ವಿಶ್ವವಿದ್ಯಾಲಯದ ಭಾಗವಾಗಿದ್ದು, ಫರಿದಾಬಾದ್‌ನಲ್ಲಿ ಬಾಡಿಗೆಗೆ ಪಡೆದಿದ್ದ ಎರಡು ಕೊಠಡಿಗಳಿಂದ 2,900 ಕೆಜಿ ಸ್ಫೋಟಕಗಳು ಮತ್ತು ದಹನಕಾರಿ ವಸ್ತುಗಳನ್ನು ವಶಪಡಿಸಿಕೊಂಡ ನಂತರ ಬಂಧಿಸಲ್ಪಟ್ಟ ಕಾಶ್ಮೀರಿ ವೈದ್ಯ ಮುಜಮ್ಮಿಲ್ ಗನೈ ಅಲಿಯಾಸ್ ಮುಸೈಬ್​ನೊಂದಿಗೆ ನಿಕಟ ಸಂಬಂಧ ಹೊಂದಿದ್ದಾಳೆಂದು ವರದಿಯಾಗಿದೆ.ಪಾಕಿಸ್ತಾನದಲ್ಲಿರುವ ಜೆಇಎಂ ಸಂಸ್ಥಾಪಕ ಮಸೂದ್ ಅಜರ್ ಅವರ ಸಹೋದರಿ ಸಾದಿಯಾ ಅಜರ್ ನೇತೃತ್ವದ ಜೆಎಂನ ಮಹಿಳಾ ವಿಭಾಗ ಜಮಾತ್ ಉಲ್-ಮೊಮಿನಾತ್‌ನ ಭಾರತ ಶಾಖೆಯ ಜವಾಬ್ದಾರಿಯನ್ನು ಡಾ.ಶಾಹೀನ್ ಶಾಹಿದ್​ಗೆ ವಹಿಸಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...