ದೆಹಲಿ ಪ್ರವಾಸ ರದ್ದುಗೊಳಿಸಿ ನೆರೆ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಯಡಿಯೂರಪ್ಪ !?

Must read

ಮಳೆ ಹಾಗೂ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಿ ಸಂತ್ರಸ್ತರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು  ಭೇಟಿ ಮಾಡಲಿದ್ದಾರೆ ಹಾಗೂ   ಪರಿಹಾರ ಕಾರ್ಯಗಳ ಪ್ರಗತಿ ಕುರಿತಾಗಿ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಸಭೆ ನಡೆಸಿ ಸಲಹೆ ಸೂಚನೆ ನೀಡಲಿದ್ದಾರೆ.

ಮತ್ತೆ ಮಳೆ ನೆರೆಹಾವಳಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಹಾನಿ ಸಂಭವಿಸಿದೆ. ಇದರಿಂದಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದು, ಸಿಎಂ ಯಡಿಯೂರಪ್ಪ ಅವರು ಇದೇ ಕಾರಣಕ್ಕೆ ದೆಹಲಿ ಪ್ರವಾಸ ರದ್ದುಗೊಳಿಸಿ ಬೆಳಗಾವಿ ಜಿಲ್ಲೆಗೆ ತೆರಳಲಿದ್ದಾರೆ ಹಾಗೂ  ನೆರೆ ಸಂತ್ರಸ್ತರ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ .

- Advertisement -spot_img

More articles

- Advertisement -spot_img

Latest article