ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರ!

Date:

ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರ!

ನವದೆಹಲಿ: ದೆಹಲಿ ಮುಖ್ಯಮಂತ್ರಿ ಯಾರಾಗ್ತಾರೆಂಬ ಕುತೂಹಲಕ್ಕೆ ಬಿಜೆಪಿ ತೆರೆ ಎಳೆದಿದೆ. ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿ ಗೆದ್ದ ಪರ್ವೇಶ್ ವರ್ಮಾ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಿಶ್ ಸೂದ್, ಜಿತೇಂದ್ರ ಮಹಾಜನ್, ರೇಖಾ ಗುಪ್ತಾ ಮುಂತಾದವರ ಹೆಸರು ಸಿಎಂ ರೇಸ್ನಲ್ಲಿತ್ತು. ಈ ಪೈಕಿ ರೇಖಾ ಗುಪ್ತಾರನ್ನು ದೆಹಲಿ ಮುಖ್ಯಮಂತ್ರಿಯಾಗಿ ಕೇಸರಿ ಪಾಳಯ ಆಯ್ಕೆ ಮಾಡಿತ್ತು.
ಇಂದು ದೆಹಲಿಯ 9ನೇ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದರು. ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ರೇಖಾ ಗುಪ್ತಾ ಅವರ ಜೊತೆಗೆ ಹೊಸದಾಗಿ ಆಯ್ಕೆಯಾದ ಆರು ಶಾಸಕರು – ಪರ್ವೇಶ್ ವರ್ಮಾ, ಆಶಿಶ್ ಸೂದ್, ಪಂಕಜ್ ಸಿಂಗ್, ಮಂಜಿಂದರ್ ಸಿಂಗ್ ಸಿರ್ಸಾ, ಕಪಿಲ್ ಮಿಶ್ರಾ ಮತ್ತು ರವೀಂದರ್ ಇಂದ್ರಜ್ ಅವರು ಸಹ ನೂತನ ಸಚಿವರುಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಮೂಲಕ ದೆಹಲಿಯಲ್ಲಿ ನಾಲ್ಕನೇ ಬಾರಿಗೆ ಮಹಿಳಾ ಶಾಸಕರೊಬ್ಬರು ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಬಿಜೆಪಿಯಿಂದ ಸುಷ್ಮಾ ಸ್ವರಾಜ್, ಕಾಂಗ್ರೆಸ್ ನಿಂದ ಶೀಲಾ ದೀಕ್ಷಿತ್, ಆಮ್ ಆದ್ಮಿ ಪಾರ್ಟಿಯಿಂದ ಆತಿಶಿ ದೆಹಲಿಯ ಮುಖ್ಯಮಂತ್ರಿಯಾಗಿದ್ದರು.
ದೆಹಲಿಯಲ್ಲಿ ಬಿಜೆಪಿ 26 ವರ್ಷಗಳ ನಂತರ ಅಧಿಕಾರಕ್ಕೆ ಮರಳಿದ್ದು, ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಏರ್ಪಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ, ಇತರ ಹಿರಿಯ ಬಿಜೆಪಿ ನಾಯಕರು ಮತ್ತು ಎನ್‌ಡಿಎ ಮಿತ್ರಪಕ್ಷಗಳ ನಾಯಕರು ಭಾಗವಹಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...

ಯಾವಾಗಲೂ ಯಂಗ್ ಆಗಿ ಕಾಣ್ಬೇಕಾ!? ಹಾಗಿದ್ರೆ ಈ ಆಹಾರ ತಪ್ಪದೇ ಸೇವಿಸಿ!

ಯಾವಾಗಲೂ ಯಂಗ್ ಆಗಿ ಕಾಣ್ಬೇಕಾ!? ಹಾಗಿದ್ರೆ ಈ ಆಹಾರ ತಪ್ಪದೇ ಸೇವಿಸಿ! ಜನರು...