ದೆಹಲಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ: ಫೆಬ್ರವರಿ 5ಕ್ಕೆ ಮತದಾನ, 8ಕ್ಕೆ ಫಲಿತಾಂಶ

Date:

ದೆಹಲಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ: ಫೆಬ್ರವರಿ 5ಕ್ಕೆ ಮತದಾನ, 8ಕ್ಕೆ ಫಲಿತಾಂಶ

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಇಂದು ದೆಹಲಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಫೆಬ್ರವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8ರಂದು ಫಲಿತಾಂಶ ಹೊರ ಬೀಳಲಿದೆ. 70 ಸದಸ್ಯ ಬಲದ ವಿಧಾನಸಭೆಯ ಅವಧಿ ಫೆಬ್ರವರಿ 23ಕ್ಕೆ ಕೊನೆಗೊಳ್ಳಲಿದ್ದು, ಅದಕ್ಕೂ ಮುನ್ನ ಹೊಸ ಸದನ ರಚನೆಗೆ ಚುನಾವಣೆ ನಡೆಯಬೇಕಿದೆ. ದೆಹಲಿಯಲ್ಲಿ ಸಾಂಪ್ರದಾಯಿಕವಾಗಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ.
85 ವರ್ಷ ಮೇಲ್ಪಟ್ಟ ಮತದಾರರು ಮತ್ತು ದಿವ್ಯಾಂಗರು ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ಸೌಲಭ್ಯವಿರುತ್ತದೆ. ಮತದಾನದ ಅನುಕೂಲಕ್ಕಾಗಿ ಮತದಾನ ಕೇಂದ್ರಗಳಲ್ಲಿ ಸ್ವಯಂಸೇವಕರು, ಗಾಲಿಕುರ್ಚಿಗಳು ಮತ್ತು ರ‍್ಯಾಂಪ್‌ಗಳನ್ನು ಮಾಡಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಜನವರಿ 17ರಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬೇಕು, ಜನವರಿ 18ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜನವರಿ 20ರೊಳಗೆ ನಾಮಪತ್ರ ಹಿಂಪಡೆಯಬಹುದು.
ಕಳೆದ ಸೋಮವಾರ ಚುನಾವಣಾ ಆಯೋಗವು ದೆಹಲಿ ವಿಧಾನಸಭಾ ಚುನಾವಣೆಯ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿತ್ತು . ಈ ಚುನಾವಣೆಯಲ್ಲಿ ಸುಮಾರು ಎರಡು ಲಕ್ಷ ಮತದಾರರು 18 ರಿಂದ 19 ವರ್ಷದೊಳಗಿನವರು. ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಈ ಪಟ್ಟಿಯಲ್ಲಿ ಒಟ್ಟು ಒಂದು ಕೋಟಿ 55,24,858 ಮತದಾರರಿದ್ದಾರೆ. ಇದರಲ್ಲಿ ಪುರುಷ ಮತದಾರರು 85,49,645, ಮಹಿಳಾ ಮತದಾರರು 71,73,952 ಇದ್ದಾರೆ. 1,261 ತೃತೀಯಲಿಂಗಿಗಳಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...