ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ಇದರ ಬೆನ್ನಲ್ಲೇ ಇ.ಡಿ ಅಧಿಕಾರಿಗಳ ತಂಡವು ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿ ಶೋಧ ಕಾರ್ಯ ನಡೆಸಿದವು. 12 ಅಧಿಕಾರಿಗಳ ತಂಡವು ಸರ್ಚ್ ವಾರಂಟ್ನೊಂದಿಗೆ ದೆಹಲಿ ಸಿಎಂ ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದ್ದವು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು, ಬಳಿಕ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್, ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ ಎಂಟು ಸಮನ್ಸ್ಗಳಿಗೂ ಸ್ಪಂದಿಸಿಲ್ಲ. ದೆಹಲಿ ಜಲ ಮಂಡಳಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಒಂದು ಸಮನ್ಸ್ಗೂ ಕೂಡ ಪ್ರತಿಕ್ರಿಯಿಸಿಲ್ಲ. ಒಂಬತ್ತು ಬಾರಿ ಇ.ಡಿ ಸಮನ್ಸ್ ನೀಡಿದೆ. ಮಧ್ಯಂತರ ರಕ್ಷಣೆ ಕೋರಿ ಕೇಜ್ರಿವಾಲ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಸದ್ಯ ಪ್ರಕರಣ ಸಂಬಂಧ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಅರೆಸ್ಟ್..!
Date: