ದೇವರೆಲ್ಲಿದ್ದಾನೆ? ಹರಕೆ ತೀರಿಸಿದ ನಿಮಿಷಗಳಲ್ಲೇ ಭಕ್ತ ಸಾವು!

Date:

ದೇವರ ಹರಕೆ ತೀರಿಸಲೆಂದು ಉಚ್ಚಂಗೆಮ್ಮ ಕ್ಷೇತ್ರದ 600 ಮೆಟ್ಟಿಲು ಹತ್ತಿ ದೇವರ ದರ್ಶನ ಪಡೆದ ಭಕ್ತನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಉಚ್ಚಂಗೆಮ್ಮ ದೇವಾಲಯದಲ್ಲಿ ನಡೆದಿದೆ.

60 ವರ್ಷದ ಹುಚ್ಚಪ್ಪ ಮೃತ ವ್ಯಕ್ತಿ. ಹುಚ್ಚಪ್ಪ 600 ಮೆಟ್ಟಿಲುಗಳನ್ನು ಹತ್ತಿ ದೇವಿಗೆ ಹರಕೆ ತೀರಿಸಿ ದೇವರ ದರ್ಶನ ಪಡೆದು ವಾಪಸ್ ಆಗುತ್ತಿದ್ದರು. ಈ ವೇಳೆ ಹೃದಯಾಘಾತಕ್ಕೀಡಾಗಿ ಕ್ಷೇತ್ರದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೃತ ಹುಚ್ಚಪ್ಪ ದಾವಣಗೆರೆ ಮೂಲದವರಾಗಿದ್ದು, ಪತ್ನಿ ಸಮೇತ ಉಚ್ಚಂಗೆಮ್ಮ ದರ್ಶನಕ್ಕೆ ತೆರಳಿದ್ದರು. ದೇವರ ದರ್ಶನ ಪಡೆದು ಹೊರ ಬರುತ್ತಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಡೋಲಿಯಲ್ಲಿ ಕೆಳಗೆ ಕರೆತಂದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...