No menu items!
5.4 C
Munich
Thursday, April 30, 2026

ದೇವೇಗೌಡರನ್ನು ಭೇಟಿಯಾದ ದಿನೇಶ್ ಗುಂಡೂರಾವ್ !? ಕಾರಣ ಗೊತ್ತಾ?

Must read

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಇಂದು ಭೇಟಿಯಾಗಿ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಮಾತುಕತೆ ನಡೆಸಿದರು.

ಪದ್ಮನಾಭನಗರದ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿದ ಅವರು, ಲೋಕಸಭೆಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಫಲಿತಾಂಶದ ಪರಾಮರ್ಶೆ ಹಾಗೂ ಅತೃಪ್ತ ಶಾಸಕರ ಆಪರೇಷನ್ ಕಮಲ ವಿಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರ ಗೊಂದಲ ಆತಂಕ ನಿವಾರಿಸಿ ಸರ್ಕಾರವನ್ನು ಸುಭದ್ರಗೊಳಿಸಿ ಮುನ್ನಡೆಸುವ ಕುರಿತಂತೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಡಿಸಿಎಂ ಪರಮೇಶ್ವರ್ ಹಾಗೂ ಶಾಸಕ ಕುಮಟಳ್ಳಿ ಜೊತೆ ಸಿಎಂ ಚರ್ಚೆ : ಬೆಂಗಳೂರು, ಮೇ 27- ಲೋಕಸಭಾ ಚುನಾವಣೆ ನಂತರದ ಬೆಳವಣಿಗೆ, ಸಂಪುಟ ವಿಸ್ತರಣೆ, ಕಾಯತಂತ್ರ ಸೇರಿದಂತೆ ಇನ್ನಿತರ ವಿಷಯಗಳ ಕುರಿತಂತೆ ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ , ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಶಾಸಕ ಮಹೇಶ್‍ಕುಮಟಳ್ಳಿ ಮಾತುಕತೆ ನಡೆಸಿದರು.

ಮಾಜಿಪ್ರಧಾನಿ ಜವಾಹರಲಾಲ್ ನೆಹರೂ ಅವರ 55ನೇ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಬಳಿಯ ನೆಹರು ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಚರ್ಚೆ ನಡೆಸಿದರು.ಬಿಜೆಪಿ ಆಪರೇಷನ್ ಕಮಲ, ಸರ್ಕಾರದ ಅಸ್ಥಿರತೆ ಹಿನ್ನೆಲೆಯಲ್ಲಿ ಇವರ ಚರ್ಚೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article