ಬೆಂಗಳೂರು: ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂಬ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.
ಇನ್ನು ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ. ತಾವು ಹೇಳಿದ್ದು ತಪ್ಪು ಎಂದು ಅವರಿಗೆ ಪ್ರಾಮಾಣಿಕವಾಗಿ ಅನುಸರಿಸಿದರೆ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬಹುದು ಎಂದರು.
ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ !
Date: