ದೇವೇಗೌಡರ ಸೋಲಿಗೆ ನಿಖಿಲ್​ ಕುಮಾರಸ್ವಾಮಿ ಕಾರಣವಂತೆ..!

Date:

ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜ್ ಅವರ ವಿರುದ್ಧ ಸೋತಿದ್ದಾರೆ. ಕೊನೆಯ ಚುನಾವಣೆ ಎಂದು ತುಮಕೂರಿಂದ ಸ್ಪರ್ಧಿಸಿದ್ದ ಮಾಜಿ ಪ್ರಧಾನಿಗಳಿಗೆ ಸೋಲಾಗಿದೆ. ಸಂಸದರಾಗಿದ್ದ ಕಾಂಗ್ರೆಸ್​ನ ಮುದ್ದಹನುಮೇಗೌಡರಿಗೆ ಟಿಕೆಟ್ ಕೊಡುವುದು ಬಿಟ್ಟು ದೇವೇಗೌಡರು ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಹಿನ್ನೆಡೆಗೆ ಕಾರಣ. ಆರಂಭದಲ್ಲಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ ಹೇಳಿದ್ದ ಸಂಸದರಾಗಿದ್ದ ಮುದ್ದಹನುಮೇಗೌಡರು ಮತ್ತು ಮಾಜಿ ಶಾಸಕ ಕೆ.ಎನ್ ರಾಜಣ್ಣ ತದನಂತರದಲ್ಲಿ ಹಿಂದೆ ಸರಿದರೂ ಅವರು ದೇವೇಗೌಡರ ಪರ ಕೆಲಸ ಮಾಡಿಲ್ಲ. ಕೆ.ಎನ್ ರಾಜಣ್ಣ ಎಲೆಕ್ಷನ್ ದಿನ ಬಿಜೆಪಿ ಅಭ್ಯರ್ಥಿ ಬಸವರಾಜ್ ಅವರ ಜೊತೆಯಲ್ಲಿ ಕಾಣಿಸಿಕೊಂಡಿದ್ದರು.
ಇಂದು ಮಧುಗಿರಿಯ ಮಾಜಿ ಶಾಸಕ ಕೆ.ಎನ್ ರಾಜಣ್ಣ ತುಮಕೂರಿನಲ್ಲಿ ದೇವೇಗೌಡ ಸೋಲಿಗೆ ಕಾರಣ ನಿಖಿಲ್ ಕುಮಾರಸ್ವಾಮಿ ಎನ್ನವು ಹೇಳಿಕೆ ನೀಡಿದ್ದಾರೆ. ದೇವೇಗೌಡರು ಸೋಲುವುದನ್ನು ನಾನು ಅಂದೇ ನಿರೀಕ್ಷಿಸಿದ್ದೆ. ಮಧುಗಿರಿಯಲ್ಲಿ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಕುಂಚಿಕ ಸಮುದಾಯದ ಹೆಣ್ಣುಮಗಳ ಜೊತೆಯಲ್ಲಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದ. ಆಮೇಲೆ ಆ ಹುಡುಗಿಯನ್ನು ಬಿಟ್ಟ…! ಇದು ಈ ಭಾಗದಲ್ಲಿ ಮತ ಕಡಿಮೆ ಬಿದ್ದು, ದೇವೇಗೌಡರ ವಿರುದ್ಧದ ಫಲಿತಾಂಶಕ್ಕೆ ಕಾರಣ ಎಂದಿದ್ದಾರೆ.
ಮುಂದುವರೆದು ತಮ್ಮ ಪಕ್ಷ, ಸರ್ಕಾರದ ವಿರುದ್ಧವೇ ಕೆ.ಎನ್ ರಾಜಣ್ಣ ಮಾತಾಡಿದ್ದಾರೆ. ನಾನೂ ಒಬ್ಬ ರಾಜಕಾರಣಿ, ನಮ್ಮದೇ ಪಕ್ಷದ ಸಮ್ಮಿಶ್ರ ಸರಕಾರ ರಾಜ್ಯದಲ್ಲಿ ಇದೆ. ಆದರೆ, ಇ ರೀತಿಯ ಭ್ರಷ್ಟ ಸರಕಾರವನ್ನು ನನ್ನ ರಾಜಕೀಯ ವೃತ್ತಿಜೀವನದಲ್ಲೇ ನೋಡಿಲ್ಲ. ರಾಜ್ಯದಲ್ಲಿ ಬರಗಾಲವಿದೆ, ಮೇವಿನಲ್ಲೂ ಕೋಟ್ಯಾಂತರ ರೂಪಾಯಿ ಹಣ ಲೂಟಿ ಮಾಡಲಾಗುತ್ತಿದೆ. ಉಪಮುಖ್ಯಮಂತ್ರಿ ಪರಮೇಶ್ವರ್ ಅವರನ್ನು ನಾನು ಡಿಸಿಎಂ ಎಂದು ಕರೆಯುವುದೇ ಇಲ್ಲ ಎಂದು ಬಹಿರಂಗವಾಗಿ ಕಿಡಿಕಾರಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...