ಜಾಮೀನಿನ ಮೂಲಕ ಹೊರಬಂದ ಡಿಕೆಶಿ ಇದೀಗ ಮೈಸೂರು, ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿರುವ ಡಿ.ಕೆ. ಶಿವಕುಮಾರ್ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಅವರು ಚಾಮುಂಡಿಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದರು.
ಮಾಜಿ ಪ್ರಧಾನಿ ದೇವೇಗೌಡರು ಕೂಡ ಚಾಮುಂಡೇಶ್ವರಿ ಸನ್ನಿಧಿಗೆ ಆಗಮಿಸಿದ್ದರು ಹಾಗೆ ದೇವೇಗೌಡರನ್ನು ಬೇಟಿ ಮಾಡಿದ, ಡಿ.ಕೆ. ಶಿವಕುಮಾರ್ ಅವರು ದೇವೇಗೌಡರ ಕಾಲಿಗೆಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಉಭಯ ನಾಯಕರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಡಿ.ಕೆ. ಶಿವಕುಮಾರ್ ಅವರನ್ನು ಜೆಡಿಎಸ್ ನಾಯಕರು ಕೂಡ ಭೇಟಿ ಮಾಡಿದ್ದಾರೆ. ಈ ಎಲ್ಲ ಬೆಳವಣಿಗೆಇಂದ ರಾಜಕೀಯ ವಲಯದಲ್ಲಿ ಎಲ್ಲರಲ್ಲಿ ಮುಂದೇನಾಗ್ತತ್ತೆ ಎಂಬ ಪ್ರಶ್ನೆ ಕೇಳಿಬರುತ್ತಿದೆ .