ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸೋಲನ್ನು ಅಪ್ಪಿದರೇ ತಾವು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ಗುಬ್ಬಿ ಶಾಸಕ ಶ್ರೀನಿವಾಸ್ ಅವರನ್ನು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತುಮಕೂರು ಸೋತಾತು, ಶ್ರೀನಿವಾಸ್ ಅವರೇ ರಾಜೀನಾಮೆ ಯಾವಾಗ ಎನ್ನುವ ಪೋಸ್ಟರ್ ಮೂಲಕ ಪ್ರಶ್ನೆ ಮಾಡುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ತುಮಕೂರಿನ ಗುಬ್ಬಿ ಶಾಸಕ ಶ್ರೀನಿವಾಸ್ ಅವರ ಬಗ್ಗೆ ರಾಜೀನಾಮೆ ಕೇಳುತ್ತಿರುವ ಸುದ್ದಿ ವೈರಲ್ ಆಗಿದೆ. ಫೇಸ್ ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ದಾವಣಗೆರೆ ಜಿಲ್ಲೆಯ ಉಸ್ತುವಾರಿ ಸಚಿವ ಶ್ರೀನಿವಾಸ್ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ತುಮಕೂರಿನಲ್ಲಿ ದೇವೇಗೌಡರು ಸೋತ್ರೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ಶ್ರೀನಿವಾಸ್ ಅವರು ಮಾತಿನಂತೆ ನಡೆದುಕೊಳ್ಳುವುದು ಯಾವಾಗ ಎಂದು ಪ್ರಶ್ನೆ ಮಾಡುತ್ತಿದ್ದಾರೆ.