ದೇಶದ ಜನತೆಗೆ ಸಿಹಿ ಸುದ್ದಿ: ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆಯಲ್ಲಿ ಇಳಿಕೆ

Date:

ನವದೆಹಲಿ: ಜುಲೈ ತಿಂಗಳ ಆರಂಭದಲ್ಲೇ  ದೇಶದ ಜನತೆಗೆ ಸಿಹಿಸುದ್ದಿ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್‌ ದರವನ್ನು 31 ರೂ. ಇಳಿಕೆ ಮಾಡಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆದರೆ, ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ ಯಾವುದೆ ಬದಲಾವಣೆಯಾಗಿಲ್ಲ. ಬೆಲೆ ಇಳಿಕೆ ನಂತರ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ 19 ಕೆಜಿಯ ಸಿಲಿಂಡರ್​ ಬೆಲೆ 1813 ರೂಪಾಯಿ ಇದೆ. ದೆಹಲಿಯಲ್ಲಿ ಪ್ರತಿ ಸಿಲಿಂಡರ್​ ಬೆಲೆ 1,646 ರೂಪಾಯಿ ಇದೆ.

ಮುಂಬೈ ಮತ್ತು ಚೆನ್ನೈನಲ್ಲಿ 19 ಕೆಜಿಯ ವಾಣಿಜ್ಯ ಸಿಲಿಂಡರ್​ ಬೆಲೆ 1,598 ಮತ್ತು 1,809.5 ರೂ. ಗೆ ಇಳಿದಿದೆ. ಎರಡೂ ನಗರಗಳಲ್ಲಿ 31 ರೂ. ಇಳಿಕೆಯಾಗಿದೆ. ಇಂಡಿಯನ್​ ಆಯಿಲ್​ ಪ್ರಕಾರ 14.5 ಕೆಜಿಯ ಸಬ್ಸಿಡಿ ಅಡುಗೆ ಅನಿಲ ಬೆಲೆ ಕೋಲ್ಕತ್ತಾದಲ್ಲಿ 892 ರೂಪಾಯಿ ಇದೆ. ದೆಹಲಿ, ಮುಂಬೈ ಮತ್ತು ಚೆನ್ನೈನಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್​ ಬೆಲೆ ಕ್ರಮವಾಗಿ 803, 802.5, 818.5 ರೂ. ಆಗಿದೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿ ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಸಿದ್ದರಿಂದ ಹೋಟೆಲ್​ ಉದ್ಯಮಿಗಳಿಗೆ ಅನುಕೂಲವಾಗಿದೆ. ಆದರೆ, ಸಬ್ಸಡಿ ರಹಿತ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್​​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...