ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ
ಚಿನ್ನದಿಂದ ತಯಾರಿಸಲಾದ ಆಭರಣಗಳಿಗೆ ಅಪಾರವಾದ ಬೇಡಿಕೆಯಿದೆ. ಅಲ್ಲದೆ, ಹೂಡಿಕೆಯಲ್ಲೂ ಸಹ ಚಿನ್ನ ಪ್ರಮುಖ ಪಾತ್ರ ವಹಿಸುತ್ತದೆ. ರಾಷ್ಟ್ರಗಳ ಆರ್ಥಿಕ ಸದೃಢತೆಯಲ್ಲೂ ಚಿನ್ನ ಮಹತ್ತರ ಕೊಡುಗೆ ನೀಡುತ್ತದೆ ಎಂದರೆ ತಪ್ಪಾಗದು.
ಹಲವಾರು ಸ್ಥಳೀಯ ಜೊತೆಗೆ ಜಾಗತಿಕ ಯುದ್ಧ ಹಾಗೂ ಇತರೆ ಕಾರಣಗಳಿಂದ ಬಂಗಾರದ ದರ ಏರಿಕೆಯಾಗಿರಬಹುದು ಎಂಬುದು ಹಲವು ತಜ್ಞರ ಅಭಿಪ್ರಾಯವಾಗಿದೆ. ವರ್ಷಗಳ ಹಿಂದೆ ಚಿನ್ನ ಖರೀದಿ ಮಾಡಿ ಹೂಡಿಕೆ ಮಾಡಿದ್ದ ವ್ಯಾಪಾರಿಗಳು ಇಂದು ಅವುಗಳನ್ನು ಮಾರಾಟ ಮಾಡುವ ಮೂಲಕ ಉತ್ತಮ ಆದಾಯದ ಫಲ ಪಡೆದಿದ್ದಾರೆ ಎನ್ನಬಹುದು.
ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್ಗೆ 55 ರೂ ಹೆಚ್ಚಳಗೊಂಡಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆ ಏರಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆಯೂ ಇವತ್ತು ಹೆಚ್ಚಿದೆ. ಗ್ರಾಮ್ಗೆ ಇದರ ಬೆಲೆ 1 ರೂ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 91,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 99,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 91,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,100 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 3ಕ್ಕೆ)
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,050 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,330 ರೂ
• 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,500 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,050 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,330 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ