ದೇಶದ ಮೊದಲ ಒಮಿಕ್ರಾನ್ ಪ್ರಕರಣ ನಮ್ಮ ರಾಜ್ಯದಲ್ಲೇ ಪತ್ತೆ!

Date:

ತೀವ್ರ ಆತಂಕಕ್ಕೆ ಕಾರಣವಾಗಿದ್ದ ಕೊರೊನಾ ಹೊಸ ರೂಪಾಂತರಿ ವೈರಸ್ ‘ಒಮಿಕ್ರಾನ್’ ರಾಜ್ಯದಲ್ಲಿ ಇಬ್ಬರಲ್ಲಿ ಪತ್ತೆಯಾಗಿದೆ ಎಂಬ ಆಘಾತಕಾರಿ ವಿಷಯವನ್ನು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಈ ಮಾಹಿತಿ ನೀಡಿದ್ದು, ಭಾರತದಲ್ಲಿಯೇ ಮೊದಲ ಒಮಿಕ್ರಾನ್ ಕೇಸ್ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಆಫ್ರಿಕಾದಿಂದ ಬಂದಿದ್ದ ಇಬ್ಬರಲ್ಲಿ ಹೊಸ ರೂಪಾಂತರಿ ತಳಿ ಪತ್ತೆಯಾಗಿದೆ ಎಂದರು.

66 ವರ್ಷದ ವೃದ್ಧ ಹಾಗೂ 46 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಕರ್ನಾಟಕದ ಮೂಲಕವೇ ಭಾರತಕ್ಕೆ ಒಮಿಕ್ರಾನ್ ಎಂಟ್ರಿಯಾಗಿದ್ದಾಗಿ ತಿಳಿಸಿದ್ದಾರೆ.

ಆಘಾತಕಾರಿ ಸಂಗತಿಯೆಂದರೆ ಈ ಹಿಂದೆ ಕರ್ನಾಟಕದಲ್ಲಿಯೇ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿತ್ತು. ಅಲ್ಲದೇ ಕೊರೊನಾದ ಮೊದಲ ಸಾವು ಸಂಭವಿಸಿದ್ದು ಸಹ ಕರ್ನಾಟಕದಲ್ಲೇ ಎಂಬುದನ್ನು ಇಲ್ಲಿ ಸ್ಮರಿಸಬಹುದು.

Share post:

Subscribe

spot_imgspot_img

Popular

More like this
Related

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ ಬೆಂಗಳೂರು: 2026ರ...

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ ಔಟ್?

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ...

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ...

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:ಭಾರತ...