No menu items!
18 C
Munich
Friday, July 24, 2026

ದೋಷಿನಾ? ನಿರ್ದೋಷಿನಾ? – ಪ್ರಜ್ವಲ್ ಗೆ ಇಂದು ಬಿಗ್ ಡೇ- ಮಹತ್ವದ ತೀರ್ಪು ಏನಿರಲಿದೆ?

Must read

ದೋಷಿನಾ? ನಿರ್ದೋಷಿನಾ? – ಪ್ರಜ್ವಲ್ ಗೆ ಇಂದು ಬಿಗ್ ಡೇ- ಮಹತ್ವದ ತೀರ್ಪು ಏನಿರಲಿದೆ?

ಬೆಂಗಳೂರು:- ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ ಆಗಿದೆ. ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿನಾ? ನಿರ್ದೋಷಿನಾ? ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಲಿದೆ.

ಕೇಸ್‌ಲ್ಲಿ 26 ಸಾಕ್ಷಿಗಳ ವಿಚಾರಣೆ ನಡೆಸಿ, ಜು.30ರಂದು ತೀರ್ಪು ಕಾಯ್ದಿರಿಸಿತ್ತು. ಆದರೆ ಬಳಿಕ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್.ಜಿ ಬಳಿ ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆಗಳನ್ನು ಕೇಳಿದ್ದರು. ಇದರೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಗ್ಗೆ ಕೆಲ ಮಾಹಿತಿ ಕೇಳಿ ಆ.1ಕ್ಕೆ ಮೂಂದುಡಿತ್ತು.

ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಇಂದು ಹೊರಬೀಳಲಿರುವ ತೀರ್ಪು ಬಹಳ ಮಹತ್ವದ್ದಾಗಿರಲಿದೆ.

- Advertisement -spot_img

More articles

- Advertisement -spot_img

Latest article