No menu items!
16.8 C
Munich
Friday, August 21, 2026

ದ್ವಾರಕೀಶ್ ಅಂತಿಮದರ್ಶನ ಪಡೆದು ಭಾವುಕರಾದ ಕಿಚ್ಚ ಸುದೀಪ್

Must read

ಬೆಂಗಳೂರು: ಹಿರಿಯ ನಟ ದ್ವಾರಕೀಶ್ ನಿನ್ನೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಟ ಕಿಚ್ಚ ಶೂಟಿಂಗ್ ಬ್ರೇಕ್ ಹಾಕಿ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಮ್ಯಾಕ್ಸ್ ಸಿನಿಮಾದ ಶೂಟಿಂಗ್ ಗಾಗಿ ಚೆನ್ನೈನಲ್ಲಿದ್ದ ಸುದೀಪ್, ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿ ದ್ವಾರಕೀಶ್ ಕುಟುಂಬದ ದುಃಖದಲ್ಲಿ ಭಾಗಿಯಾಗಿದ್ದಾರೆ. ದ್ವಾರಕೀಶ್ ಬ್ಯಾನರ್ ನಲ್ಲಿ ಸುದೀಪ್ ಸಿನಿಮಾ ಮಾಡಿದ್ದರು. ವಿಷ್ಣುವರ್ಧನ್ ಹೆಸರಿನ ಈ ಸಿನಿಮಾ ದ್ವಾರಕೀಶ್ ಅವರ ಆರ್ಥಿಕ ಸ್ಥಿತಿಯನ್ನು ಚೇತರಿಕೆ ಕಾಣುವಂತೆ ಮಾಡಿತ್ತು
ರವೀಂದ್ರ ಕಲಾಕ್ಷೇತ್ರದಲ್ಲಿ ಸದ್ಯ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಟಿ.ಆರ್ ಮಿಲ್ ರುದ್ರಭೂಮಿಯಲ್ಲಿ ಮಾಡುವುದಾಗಿ ದ್ವಾರಕೀಶ್ ಅವರ ಪುತ್ರ ಯೋಗೀಶ್ ತಿಳಿಸಿದ್ದಾರೆ. ಬ್ರಾಹ್ಮಣರ ವಿಧಿ ವಿಧಾನದ ರೀತಿಯಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತಿದ್ದು, ದ್ವಾರಕೀಶ್ ಅವರ ಹಿರಿಯ ಪುತ್ರ ವಿಧಿ ವಿಧಾನಗಳನ್ನು ನೆರವೇರಿಸಲಿದ್ದಾರೆ.

- Advertisement -spot_img

More articles

- Advertisement -spot_img

Latest article