ಚಿತ್ರದುರ್ಗ:- ಹೊಳಲ್ಕೆರೆ ತಾಲೂಕಿನ ಕುಡಿನೀರುಕಟ್ಟೆ ಗ್ರಾಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಸೂಸೈಡ್ ಮಾಡಿಕೊಂಡಿರುವ ಘಟನೆ ಜರುಗಿದೆ.
ಕೃಪಾ ಮೃತ ವಿದ್ಯಾರ್ಥಿನಿ. ಈಕೆ ಚಂದ್ರಶೇಖರಪ್ಪ, ವೀಣಾ ದಂಪತಿಯ ಮಗಳು. ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾಳೆ. ಈಕೆ ದಾವಣಗೆರೆಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ವಿಜ್ಞಾನ ವಿಭಾಗದಲ್ಲಿ ಎರಡು ವಿಷಗಳಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇನ್ನೂ ಮಗಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.