ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

0
48

ದ್ವಿತೀಯ ಪಿಯುಸಿಯ ಪುನರಾವರ್ತಿತ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ಕುರಿತು ಇದ್ದ ಗೊಂದಲಗಳಿಗೆ ರಾಜ್ಯ ಸರ್ಕಾರ ಸೋಮವಾರ ತೆರೆ ಎಳೆದಿದ್ದು, ಪುನರಾವರ್ತಿತ ವಿದ್ಯಾರ್ಥಿಗಳನ್ನು ಪಾಸ್‌ ಮಾಡುವುದಾಗಿ ತಿಳಿಸಿದೆ.
ಸೋಮವಾರ ಈ ಕುರಿತು ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಸಂದರ್ಭ ಸರ್ಕಾರ ಮಾಹಿತಿ ನೀಡಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಅವರ ಪ್ರಥಮ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದಲ್ಲಿ ತೇರ್ಗಡೆ ಮಾಡಲು ನಿರ್ಧರಿಸಲಾಗಿತ್ತು. ಎಸ್‌ಎಸ್‌ಎಲ್‌ಸಿ, ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಅಸೆಸ್ಮೆಂಟ್ ಆಧಾರದಲ್ಲಿ ಅಂಕ ನೀಡಲಾಗುವುದು ಎಂದು ತಿಳಿಸಿತ್ತು. ಆದರೆ ಪುನರಾವರ್ತಿತ ವಿದ್ಯಾರ್ಥಿಗಳ ಕುರಿತು ಗೊಂದಲ ಏರ್ಪಟ್ಟಿತ್ತು.
ಮೊದಲ ಬಾರಿ ಪಿಯುಸಿ ಪರೀಕ್ಷೆ ಎದುರಿಸುತ್ತಿದ್ದ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗಿದೆ. ಆದರೆ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಯಾಕೆ ಎಂದು ಪ್ರಶ್ನಿಸಿ ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೋಗಿದ್ದರು.


ಇದೀಗ ಪುನರಾವರ್ತಿತ ವಿದ್ಯಾರ್ಥಿಗಳನ್ನು ಪಾಸ್‌ ಮಾಡುವುದಾಗಿ ಸರ್ಕಾರ ತಿಳಿಸಿದೆ. ವಿದ್ಯಾರ್ಥಿಗಳಿಗೆ ಕನಿಷ್ಠ ಶೇ 35 ಅಂಕದ ಜೊತೆ ಶೇ. 5ರಷ್ಟು ಗ್ರೇಸ್ ಅಂಕಗಳನ್ನು ನೀಡಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಜುಲೈ 31ರ ಒಳಗೆ ಫಲಿತಾಂಶ ಪ್ರಕಟಿಸುವಂತೆ ಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.
ಆದರೆ ದ್ವಿತೀಯ ಪಿಯುಸಿ ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ. ಖಾಸಗಿ ವಿದ್ಯಾರ್ಥಿಗಳಿಗೆ ಆಗಸ್ಟ್‌ 31ರೊಳಗೆ ಪರೀಕ್ಷೆ ನಡೆಸಿ, ಸೆಪ್ಟೆಂಬರ್ 20ರ ಒಳಗೆ ಫಲಿತಾಂಶ ಪ್ರಕಟಿಸುವಂತೆ ಕೋರ್ಟ್ ತಿಳಿಸಿದೆ.

LEAVE A REPLY

Please enter your comment!
Please enter your name here